John · chapter 2 · verse 16
John 2:16 in Kannada
ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
Aatanu paarivaala maaruva varige--ivugalannu illinda takkondu hogiri; nanna tandeya maneyannu vyaapaarada maneya nnaagi maadabediri andanu.
John 2:16 in English
- King James Version (KJV)
- And said unto them that sold doves, Take these things hence; make not my Father’s house an house of merchandise.
- World English Bible (WEB)
- To those who sold the doves, he said, “Take these things out of here! Don’t make my Father’s house a marketplace!”
- American Standard Version (ASV)
- and to them that sold the doves he said, Take these things hence; make not my Father’s house a house of merchandise.
- Bible in Basic English (BBE)
- And to those who were trading in doves he said, Take these things away; do not make my Father's house a market.
- Darby Translation (DBY)
- and said to the sellers of doves, Take these things hence; make not my Father's house a house of merchandise.
- Webster's Bible (WBS)
- And said to them that sold doves, Take these things hence: make not my Father's house a house of merchandise.
- Young's Literal Translation (YLT)
- and to those selling the doves he said, 'Take these things hence; make not the house of my Father a house of merchandise.'
Read in context
- 14ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
- 15ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
- 16ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
- 17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- 18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
Cross references
- Jeremiah 7:11 ಯೆರೆಮೀಯ 7:11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Matthew 21:13 ಮತ್ತಾಯನು 21:13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Mark 11:17 ಮಾರ್ಕನು 11:17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Isaiah 56:5–11 ಯೆಶಾಯ 56:5–11ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು. ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ. ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Luke 2:49 ಲೂಕನು 2:49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
- 2 Peter 2:14–15 2 ಪೇತ್ರನು 2:14–15ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Hosea 12:7–8 ಹೋಶೇಯ 12:7–8ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ. ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- John 5:17 ಯೋಹಾನನು 5:17ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 1 Timothy 6:5 1 ತಿಮೊಥೆಯನಿಗೆ 6:5ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- Acts 19:24–27 ಅಪೊಸ್ತಲರ ಕೃತ್ಯಗಳು 19:24–27ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು. ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ. ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು