John · chapter 2 · verse 7
John 2:7 in Kannada
ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
Yesu avarige--aa baane galalli neeru tumbiri andanu. Avaru avugalannu kanthadavarege tumbiddaru.
John 2:7 in English
- King James Version (KJV)
- Jesus saith unto them, Fill the waterpots with water. And they filled them up to the brim.
- World English Bible (WEB)
- Jesus said to them, “Fill the water pots with water.” So they filled them up to the brim.
- American Standard Version (ASV)
- Jesus saith unto them, Fill the waterpots with water. And they filled them up to the brim.
- Bible in Basic English (BBE)
- Jesus said to the servants, Make the pots full of water. And they made them full to the top.
- Darby Translation (DBY)
- Jesus says to them, Fill the water-vessels with water. And they filled them up to the brim.
- Webster's Bible (WBS)
- Jesus saith to them, Fill the waterpots with water. And they filled them to the brim.
- Young's Literal Translation (YLT)
- Jesus saith to them, 'Fill the water-jugs with water;' and they filled them — unto the brim;
Read in context
- 5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- 6ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
- 7ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
- 8ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
- 9ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
Cross references
- 2 Kings 4:2–6 2 ಅರಸುಗಳು 4:2–6ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು. ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- 1 Kings 17:13 1 ಅರಸುಗಳು 17:13ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
- John 2:3 ಯೋಹಾನನು 2:3ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
- Mark 11:2–6 ಮಾರ್ಕನು 11:2–6ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
- Mark 14:12–17 ಮಾರ್ಕನು 14:12–17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು. ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ. ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ. ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು. ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು. ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
- 2 Kings 5:10–14 2 ಅರಸುಗಳು 5:10–14ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು. ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು. ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು. ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು. ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
- Joshua 6:3–5 ಯೆಹೋಶುವ 6:3–5ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು. ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು. ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
- Numbers 21:6–9 ಅರಣ್ಯಕಾಂಡ 21:6–9ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು. ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು. ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು. ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
- Acts 8:26–40 ಅಪೊಸ್ತಲರ ಕೃತ್ಯಗಳು 8:26–40ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು; ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.