John · chapter 20 · verse 17
John 20:17 in Kannada
ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
Yesu aakege--nannannu muttabeda; yaakandare naanu innoo nanna tandeya balige erihogalilla; aadare neenu nanna sahodarara balige hogi ava rige--nanna tandeyoo nimma tandeyoo nanna devaroo nimma devaroo aagiruvaatana balige naanu erihoguttene endu helu
John 20:17 in English
- King James Version (KJV)
- Jesus saith unto her, Touch me not; for I am not yet ascended to my Father: but go to my brethren, and say unto them, I ascend unto my Father, and your Father; and [to] my God, and your God.
- World English Bible (WEB)
- Jesus said to her, “Don’t hold me, for I haven’t yet ascended to my Father; but go to my brothers and tell them, ‘I am ascending to my Father and your Father, to my God and your God.’”
- American Standard Version (ASV)
- Jesus saith to her, Touch me not; for I am not yet ascended unto the Father: but go unto my brethren, and say to them, I ascend unto my Father and your Father, and my God and your God.
- Bible in Basic English (BBE)
- Jesus said to her, Do not put your hand on me, for I have not gone up to the Father: but go to my brothers and say to them, I go up to my Father and your Father, to my God and your God.
- Darby Translation (DBY)
- Jesus says to her, Touch me not, for I have not yet ascended to my Father; but go to my brethren and say to them, I ascend to my Father and your Father, and [to] my God and your God.
- Webster's Bible (WBS)
- Jesus saith to her, Touch me not: for I have not yet ascended to my Father: but go to my brethren, and say to them, I ascend to my Father and your Father, and [to] my God and your God.
- Young's Literal Translation (YLT)
- Jesus saith to her, 'Be not touching me, for I have not yet ascended unto my Father; and be going on to my brethren, and say to them, I ascend unto my Father, and your Father, and to my God, and to your God.'
Read in context
- 15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
- 16ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
- 17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- 18ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- 19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
Cross references
- John 16:28 ಯೋಹಾನನು 16:28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- Ephesians 4:8–10 ಎಫೆಸದವರಿಗೆ 4:8–10ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- Galatians 4:6–7 ಗಲಾತ್ಯದವರಿಗೆ 4:6–7ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- John 17:11 ಯೋಹಾನನು 17:11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Galatians 3:26 ಗಲಾತ್ಯದವರಿಗೆ 3:26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- Psalm 68:18 ಕೀರ್ತನೆಗಳು 68:18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Hebrews 2:11–13 ಇಬ್ರಿಯರಿಗೆ 2:11–13ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
- Ephesians 1:17–23 ಎಫೆಸದವರಿಗೆ 1:17–23ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.