John · chapter 3 · verse 11
John 3:11 in Kannada
ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
Naanu ninage nijanija vaagi heluttene, naavu aritiruvadannu maatanaadutteve mattu nodi ddakke saaksheekarisutteve; aadare neevu namma saakshi yannu angeekarisuvadilla.
John 3:11 in English
- King James Version (KJV)
- Verily, verily, I say unto thee, We speak that we do know, and testify that we have seen; and ye receive not our witness.
- World English Bible (WEB)
- Most certainly I tell you, we speak that which we know and testify of that which we have seen, and you don’t receive our witness.
- American Standard Version (ASV)
- Verily, verily, I say unto thee, We speak that which we know, and bear witness of that which we have seen; and ye receive not our witness.
- Bible in Basic English (BBE)
- Truly, I say to you, We say that of which we have knowledge; we give witness of what we have seen; and you do not take our witness to be true.
- Darby Translation (DBY)
- Verily, verily, I say unto thee, We speak that which we know, and we bear witness of that which we have seen, and ye receive not our witness.
- Webster's Bible (WBS)
- Verily, verily, I say to thee, We speak what we know, and testify what we have seen; and ye receive not our testimony.
- Young's Literal Translation (YLT)
- 'Verily, verily, I say to thee — What we have known we speak, and what we have seen we testify, and our testimony ye do not receive;
Read in context
- 9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
- 10ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
- 11ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
- 12ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
- 13ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
Cross references
- John 8:38 ಯೋಹಾನನು 8:38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
- 1 John 5:6–12 1 ಯೋಹಾನನು 5:6–12ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ. ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ. ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ. ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- John 8:14 ಯೋಹಾನನು 8:14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- John 12:49 ಯೋಹಾನನು 12:49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 14:24 ಯೋಹಾನನು 14:24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- John 8:28–29 ಯೋಹಾನನು 8:28–29ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ. ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- John 7:16 ಯೋಹಾನನು 7:16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
- John 3:32–34 ಯೋಹಾನನು 3:32–34ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- Isaiah 65:2 ಯೆಶಾಯ 65:2ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Isaiah 53:1 ಯೆಶಾಯ 53:1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?