John · chapter 3 · verse 20
John 3:20 in Kannada
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
Kettaddannu maaduva prati yobbanu tanna krutyagalu khandisalpattaavendu belakannu hagemaaduttaane mattu belakige baruvadilla.
John 3:20 in English
- King James Version (KJV)
- For every one that doeth evil hateth the light, neither cometh to the light, lest his deeds should be reproved.
- World English Bible (WEB)
- For everyone who does evil hates the light and doesn’t come to the light, lest his works would be exposed.
- American Standard Version (ASV)
- For every one that doeth evil hateth the light, and cometh not to the light, lest his works should be reproved.
- Bible in Basic English (BBE)
- The light is hated by everyone whose acts are evil and he does not come to the light for fear that his acts will be seen.
- Darby Translation (DBY)
- For every one that does evil hates the light, and does not come to the light that his works may not be shewn as they are;
- Webster's Bible (WBS)
- For every one that doeth evil hateth the light, neither cometh to the light, lest his deeds should be reproved.
- Young's Literal Translation (YLT)
- for every one who is doing wicked things hateth the light, and doth not come unto the light, that his works may not be detected;
Read in context
- 18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- 19ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
- 20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- 21ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- 22ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
Cross references
- Ephesians 5:11–13 ಎಫೆಸದವರಿಗೆ 5:11–13ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ. ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ. ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- Job 24:13–17 ಯೋಬನು 24:13–17ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು. ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Proverbs 1:29 ಜ್ಞಾನೋಕ್ತಿಗಳು 1:29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- James 1:23–25 ಯಾಕೋಬನು 1:23–25ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- Psalm 50:17 ಕೀರ್ತನೆಗಳು 50:17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Proverbs 15:12 ಜ್ಞಾನೋಕ್ತಿಗಳು 15:12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
- Amos 5:10–11 ಆಮೋಸ 5:10–11ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ. ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- Proverbs 5:12 ಜ್ಞಾನೋಕ್ತಿಗಳು 5:12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
- Luke 11:45 ಲೂಕನು 11:45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.