John · chapter 3 · verse 27
John 3:27 in Kannada
ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
Yohaananu pratyuttaravaagi--paraloka dinda obba manushyanige kodalpadada horatu avanu yaavadannoo hondalaaranu.
John 3:27 in English
- King James Version (KJV)
- John answered and said, A man can receive nothing, except it be given him from heaven.
- World English Bible (WEB)
- John answered, “A man can receive nothing unless it has been given him from heaven.
- American Standard Version (ASV)
- John answered and said, A man can receive nothing, except it have been given him from heaven.
- Bible in Basic English (BBE)
- And this was John's answer: A man is unable to have anything if it is not given to him from heaven.
- Darby Translation (DBY)
- John answered and said, A man can receive nothing unless it be given him out of heaven.
- Webster's Bible (WBS)
- John answered and said, A man can receive nothing, except it be given him from heaven.
- Young's Literal Translation (YLT)
- John answered and said, 'A man is not able to receive anything, if it may not have been given him from the heaven;
Read in context
- 25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
- 26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- 27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
- 28ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
- 29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
Cross references
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 1 Corinthians 4:7 1 ಕೊರಿಂಥದವರಿಗೆ 4:7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Amos 7:15 ಆಮೋಸ 7:15ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
- 1 Corinthians 2:12–14 1 ಕೊರಿಂಥದವರಿಗೆ 2:12–14ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು. ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ. ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Matthew 25:15 ಮತ್ತಾಯನು 25:15ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
- Hebrews 5:4–5 ಇಬ್ರಿಯರಿಗೆ 5:4–5ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Jeremiah 17:16 ಯೆರೆಮೀಯ 17:16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- Numbers 17:5 ಅರಣ್ಯಕಾಂಡ 17:5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
Original words (Greek)
- John · G2491Ἰωάννης Iōánnēs
- answered · G611ἀποκρίνομαι apokrínomai
- and · G2532καί kaí
- said · G2036ἔπω épō
- man · G444ἄνθρωπος ánthrōpos
- can · G1410δύναμαι dýnamai
- receive · G2983λαμβάνω lambánō
- nothing · G3762οὐδείς oudeís
- except · G3361μή mḗ
- be · G5600ὦ ō
- given · G1325δίδωμι dídōmi
- him · G846αὐτός autós
- from · G1537ἐκ ek
- heaven · G3772οὐρανός ouranós