John · chapter 3 · verse 33
John 3:33 in Kannada
ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
Aatana saakshiyannu angeekarisidavanu devaru satyavantanembadakke tanna mudreyannu haakiddaane.
John 3:33 in English
- King James Version (KJV)
- He that hath received his testimony hath set to his seal that God is true.
- World English Bible (WEB)
- He who has received his witness has set his seal to this, that God is true.
- American Standard Version (ASV)
- He that hath received his witness hath set his seal to [this], that God is true.
- Bible in Basic English (BBE)
- He who so takes his witness has made clear his faith that God is true.
- Darby Translation (DBY)
- He that has received his testimony has set to his seal that God is true;
- Webster's Bible (WBS)
- He that hath received his testimony, hath set to his seal that God is true.
- Young's Literal Translation (YLT)
- he who is receiving his testimony did seal that God is true;
Read in context
- 31ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
- 32ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
- 33ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
- 34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- 35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
Cross references
- Ephesians 1:13 ಎಫೆಸದವರಿಗೆ 1:13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- Hebrews 6:17 ಇಬ್ರಿಯರಿಗೆ 6:17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- Titus 1:1–2 ತೀತನಿಗೆ 1:1–2ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 2 Corinthians 1:18 2 ಕೊರಿಂಥದವರಿಗೆ 1:18ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Romans 4:18–21 ರೋಮಾಪುರದವರಿಗೆ 4:18–21ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Romans 3:3–4 ರೋಮಾಪುರದವರಿಗೆ 3:3–4ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ? ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- 1 John 5:9–10 1 ಯೋಹಾನನು 5:9–10ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- Revelation 7:3–8 ಪ್ರಕಟನೆ 7:3–8ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು. ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ. ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.