John · chapter 3 · verse 5
John 3:5 in Kannada
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
Yesu pratyuttaravaagi avanige--ninage nijanija vaagi heluttene, obbanu neerinindaloo aatma nindaloo huttadiddare avanu devara raajyadolage praveshisalaaranu.
John 3:5 in English
- King James Version (KJV)
- Jesus answered, Verily, verily, I say unto thee, Except a man be born of water and [of] the Spirit, he cannot enter into the kingdom of God.
- World English Bible (WEB)
- Jesus answered, “Most certainly I tell you, unless one is born of water and Spirit, he can’t enter into God’s Kingdom.
- American Standard Version (ASV)
- Jesus answered, Verily, verily, I say unto thee, Except one be born of water and the Spirit, he cannot enter into the kingdom of God.
- Bible in Basic English (BBE)
- Jesus said in answer, Truly, I say to you, If a man's birth is not from water and from the Spirit, it is not possible for him to go into the kingdom of God.
- Darby Translation (DBY)
- Jesus answered, Verily, verily, I say unto thee, Except any one be born of water and of Spirit, he cannot enter into the kingdom of God.
- Webster's Bible (WBS)
- Jesus answered, Verily, verily, I say to thee, Except a man be born of water, and [of] the Spirit, he cannot enter into the kingdom of God.
- Young's Literal Translation (YLT)
- Jesus answered, 'Verily, verily, I say to thee, If any one may not be born of water, and the Spirit, he is not able to enter into the reign of God;
Read in context
- 3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- 4ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
- 5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- 6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- 7ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
Cross references
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Ephesians 5:26 ಎಫೆಸದವರಿಗೆ 5:26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- 1 John 5:6–8 1 ಯೋಹಾನನು 5:6–8ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ. ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ. ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
- Isaiah 44:3–4 ಯೆಶಾಯ 44:3–4ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
- Titus 3:4–7 ತೀತನಿಗೆ 3:4–7ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- 2 Corinthians 5:17–18 2 ಕೊರಿಂಥದವರಿಗೆ 5:17–18ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು. ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.