John · chapter 3 · verse 6
John 3:6 in Kannada
ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
Shareeradinda huttiddu sharee rave; aatmaninda huttiddu aatmave.
John 3:6 in English
- King James Version (KJV)
- That which is born of the flesh is flesh; and that which is born of the Spirit is spirit.
- World English Bible (WEB)
- That which is born of the flesh is flesh. That which is born of the Spirit is spirit.
- American Standard Version (ASV)
- That which is born of the flesh is flesh; and that which is born of the Spirit is spirit.
- Bible in Basic English (BBE)
- That which has birth from the flesh is flesh, and that which has birth from the Spirit is spirit.
- Darby Translation (DBY)
- That which is born of the flesh is flesh; and that which is born of the Spirit is spirit.
- Webster's Bible (WBS)
- That which is born of the flesh, is flesh; and that which is born of the Spirit, is spirit.
- Young's Literal Translation (YLT)
- that which hath been born of the flesh is flesh, and that which hath been born of the Spirit is spirit.
Read in context
- 4ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
- 5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- 6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- 7ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
- 8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
Cross references
- Galatians 5:16–21 ಗಲಾತ್ಯದವರಿಗೆ 5:16–21ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ. ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ. ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Ezekiel 36:26–27 ಯೆಹೆಜ್ಕೇಲನು 36:26–27ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Romans 8:4–9 ರೋಮಾಪುರದವರಿಗೆ 8:4–9ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು. ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ. ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು. ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- 1 Corinthians 15:47–50 1 ಕೊರಿಂಥದವರಿಗೆ 15:47–50ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
- 1 Corinthians 6:17 1 ಕೊರಿಂಥದವರಿಗೆ 6:17ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
- Romans 7:18 ರೋಮಾಪುರದವರಿಗೆ 7:18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- Genesis 6:12 ಆದಿಕಾಂಡ 6:12ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.