John · chapter 3 · verse 8
John 3:8 in Kannada
ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
Gaaliyu tanna manassu banda kadege beesuttade; neenu adara shabdavannu keluttee; aadare adu ellinda baruttado ellige hogu ttado helalaari; adaranteye aatmaninda huttida pratiyobbanu iddaane andanu.
John 3:8 in English
- King James Version (KJV)
- The wind bloweth where it listeth, and thou hearest the sound thereof, but canst not tell whence it cometh, and whither it goeth: so is every one that is born of the Spirit.
- World English Bible (WEB)
- The wind blows where it wants to, and you hear its sound, but don’t know where it comes from and where it is going. So is everyone who is born of the Spirit.”
- American Standard Version (ASV)
- The wind bloweth where it will, and thou hearest the voice thereof, but knowest not whence it cometh, and whither it goeth: so is every one that is born of the Spirit.
- Bible in Basic English (BBE)
- The wind goes where its pleasure takes it, and the sound of it comes to your ears, but you are unable to say where it comes from and where it goes: so it is with everyone whose birth is from the Spirit.
- Darby Translation (DBY)
- The wind blows where it will, and thou hearest its voice, but knowest not whence it comes and where it goes: thus is every one that is born of the Spirit.
- Webster's Bible (WBS)
- The wind bloweth where it will, and thou hearest the sound of it, but canst not tell whence it cometh, and whither it goeth: so is every one that is born of the Spirit.
- Young's Literal Translation (YLT)
- the Spirit where he willeth doth blow, and his voice thou dost hear, but thou hast not known whence he cometh, and whither he goeth; thus is every one who hath been born of the Spirit.'
Read in context
- 6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- 7ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
- 8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
- 9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
- 10ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
Cross references
- Ecclesiastes 11:4–5 ಪ್ರಸಂಗಿ 11:4–5ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ. ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- 1 Corinthians 2:11 1 ಕೊರಿಂಥದವರಿಗೆ 2:11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
- Acts 2:2 ಅಪೊಸ್ತಲರ ಕೃತ್ಯಗಳು 2:2ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Mark 4:26–29 ಮಾರ್ಕನು 4:26–29ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ. ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು. ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ. ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- John 1:13 ಯೋಹಾನನು 1:13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- 1 Corinthians 12:11 1 ಕೊರಿಂಥದವರಿಗೆ 12:11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Job 37:10–13 ಯೋಬನು 37:10–13ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು. ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ. ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ. ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
- Job 37:21–23 ಯೋಬನು 37:21–23ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು. ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು. ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Job 37:16–17 ಯೋಬನು 37:16–17ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ? ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?