John · chapter 4 · verse 29
John 4:29 in Kannada
ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
Banniri, naanu maadidavugalannellaa nanage tilisida manushyanannu nodiri; eetanu aa kristanallave andalu.
John 4:29 in English
- King James Version (KJV)
- Come, see a man, which told me all things that ever I did: is not this the Christ?
- World English Bible (WEB)
- “Come, see a man who told me everything that I have done. Can this be the Christ?”
- American Standard Version (ASV)
- Come, see a man, who told me all things that [ever] I did: can this be the Christ?
- Bible in Basic English (BBE)
- Come and see a man who has been talking to me of everything I ever did! Is it possible that this is the Christ?
- Darby Translation (DBY)
- Come, see a man who told me all things I had ever done: is not he the Christ?
- Webster's Bible (WBS)
- Come, see a man who hath told me all things that ever I did: is not this the Christ?
- Young's Literal Translation (YLT)
- 'Come, see a man, who told me all things — as many as I did; is this the Christ?'
Read in context
- 27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
- 28ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
- 29ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
- 30ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.
- 31ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು.
Cross references
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- 1 Corinthians 14:24–25 1 ಕೊರಿಂಥದವರಿಗೆ 14:24–25ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- John 1:41–49 ಯೋಹಾನನು 1:41–49ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ). ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು. ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು. ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು. ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು. ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು. ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು. ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- John 4:25 ಯೋಹಾನನು 4:25ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
- John 4:17–18 ಯೋಹಾನನು 4:17–18ಆಗ ಆ ಸ್ತ್ರೀಯು ಪ್ರತ್ಯುತ್ತರ ವಾಗಿ--ನನಗೆ ಗಂಡನಿಲ್ಲ ಅಂದಳು, ಯೇಸು ಆಕೆಗೆ--ನನಗೆ ಗಂಡನಿಲ್ಲ ಎಂದು ನೀನು ಹೇಳಿದ್ದು ಸರಿಯೇ; ಯಾಕಂದರೆ ನಿನಗೆ ಐದು ಮಂದಿ ಗಂಡಂದಿರಿದ್ದರು; ಈಗ ನಿನಗಿರುವವನು ನಿನ್ನ ಗಂಡ ನಲ್ಲ; ಆ ವಿಷಯದಲ್ಲಿ ನೀನು ಹೇಳಿದ್ದು ಸತ್ಯವಾದದ್ದು ಅಂದನು.
- John 7:26 ಯೋಹಾನನು 7:26ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
- John 7:31 ಯೋಹಾನನು 7:31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
- Matthew 12:23 ಮತ್ತಾಯನು 12:23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.