John · chapter 5 · verse 19
John 5:19 in Kannada
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
Aaga yesu pratyuttaravaagi avarige-- naanu nimage nijanijavaagi heluttene, tandeyu maaduvadannu kandaddannallade maganu tannashtakke taane yaavadannoo maadalaaranu; aatanu maaduvadannellaa haageye maganoo maaduvanu.
John 5:19 in English
- King James Version (KJV)
- Then answered Jesus and said unto them, Verily, verily, I say unto you, The Son can do nothing of himself, but what he seeth the Father do: for what things soever he doeth, these also doeth the Son likewise.
- World English Bible (WEB)
- Jesus therefore answered them, “Most certainly, I tell you, the Son can do nothing of himself, but what he sees the Father doing. For whatever things he does, these the Son also does likewise.
- American Standard Version (ASV)
- Jesus therefore answered and said unto them, Verily, verily, I say unto you, The Son can do nothing of himself, but what he seeth the Father doing: for what things soever he doeth, these the Son also doeth in like manner.
- Bible in Basic English (BBE)
- So Jesus made answer and said, Truly I say to you, The Son is not able to do anything himself; he is able to do only what he sees the Father doing; whatever the Father does the Son does it in the same way.
- Darby Translation (DBY)
- Jesus therefore answered and said to them, Verily, verily, I say to you, The Son can do nothing of himself save whatever he sees the Father doing: for whatever things he does, these things also the Son does in like manner.
- Webster's Bible (WBS)
- Then answered Jesus, and said to them, Verily, verily, I say to you, The Son can do nothing by himself, but what he seeth the Father do: for whatever things he doeth, these also doeth the Son likewise.
- Young's Literal Translation (YLT)
- Jesus therefore responded and said to them, 'Verily, verily, I say to you, The Son is not able to do anything of himself, if he may not see the Father doing anything; for whatever things He may do, these also the Son in like manner doth;
Read in context
- 17ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
- 18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- 19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
- 20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
- 21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
Cross references
- John 12:49 ಯೋಹಾನನು 12:49ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 8:28 ಯೋಹಾನನು 8:28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
- John 14:10 ಯೋಹಾನನು 14:10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- John 10:18 ಯೋಹಾನನು 10:18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- John 5:28–30 ಯೋಹಾನನು 5:28–30ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- John 14:16–23 ಯೋಹಾನನು 14:16–23ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು. ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- John 5:24–26 ಯೋಹಾನನು 5:24–26ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.