John · chapter 5 · verse 27
John 5:27 in Kannada
ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
Aatanu manushyakumaara naagiruvadarinda nyaayateerisuva adhikaaravannu saha aatanige kottiddaane.
John 5:27 in English
- King James Version (KJV)
- And hath given him authority to execute judgment also, because he is the Son of man.
- World English Bible (WEB)
- He also gave him authority to execute judgment, because he is a son of man.
- American Standard Version (ASV)
- and he gave him authority to execute judgment, because he is a son of man.
- Bible in Basic English (BBE)
- And he has given him authority to be judge because he is the Son of man.
- Darby Translation (DBY)
- and has given him authority to execute judgment [also], because he is Son of man.
- Webster's Bible (WBS)
- And hath given him authority to execute judgment also, because he is the Son of man.
- Young's Literal Translation (YLT)
- and authority He gave him also to do judgment, because he is Son of Man.
Read in context
- 25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- 26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
- 27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- 28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
- 29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
Cross references
- Acts 10:42 ಅಪೊಸ್ತಲರ ಕೃತ್ಯಗಳು 10:42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- John 5:22 ಯೋಹಾನನು 5:22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Daniel 7:13–14 ದಾನಿಯೇಲನು 7:13–14ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Hebrews 2:7–9 ಇಬ್ರಿಯರಿಗೆ 2:7–9ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ; ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Psalm 110:6 ಕೀರ್ತನೆಗಳು 110:6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Ephesians 1:20–23 ಎಫೆಸದವರಿಗೆ 1:20–23ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Psalm 110:1–2 ಕೀರ್ತನೆಗಳು 110:1–2ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
- Philippians 2:7–11 ಫಿಲಿಪ್ಪಿಯವರಿಗೆ 2:7–11ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.