John · chapter 5 · verse 28
John 5:28 in Kannada
ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
Idakke aashcharyapada bediri; ondu kaala baruttade; aaga samaadhigalalli ruvavarellaroo aatana dhvaniyannu keli horage baruvaru,
John 5:28 in English
- King James Version (KJV)
- Marvel not at this: for the hour is coming, in the which all that are in the graves shall hear his voice,
- World English Bible (WEB)
- Don’t marvel at this, for the hour comes in which all who are in the tombs will hear his voice
- American Standard Version (ASV)
- Marvel not at this: for the hour cometh, in which all that are in the tombs shall hear his voice,
- Bible in Basic English (BBE)
- Do not be surprised at this: for the time is coming when his voice will come to all who are in the place of the dead,
- Darby Translation (DBY)
- Wonder not at this, for an hour is coming in which all who are in the tombs shall hear his voice,
- Webster's Bible (WBS)
- Marvel not at this: for the hour is coming, in which all that are in the graves shall hear his voice,
- Young's Literal Translation (YLT)
- 'Wonder not at this, because there doth come an hour in which all those in the tombs shall hear his voice,
Read in context
- 26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
- 27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- 28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
- 29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- 30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
Cross references
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- 1 Thessalonians 4:14–17 1 ಥೆಸಲೊನೀಕದವರಿಗೆ 4:14–17ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ. ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು; ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- John 11:24–25 ಯೋಹಾನನು 11:24–25ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು. ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
- Job 19:25–26 ಯೋಬನು 19:25–26ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- 1 Corinthians 15:42–54 1 ಕೊರಿಂಥದವರಿಗೆ 15:42–54ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ. ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- 1 Corinthians 15:22 1 ಕೊರಿಂಥದವರಿಗೆ 15:22ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
- John 6:39–40 ಯೋಹಾನನು 6:39–40ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Ezekiel 37:1–10 ಯೆಹೆಜ್ಕೇಲನು 37:1–10ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು. ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು. ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ; ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ. ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ. ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ, ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.