John · chapter 5 · verse 29
John 5:29 in Kannada
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
Olledannu maadidavaru jeevada punarutthaanavannoo kettaddannu maadidavaru teerpina punarutthaanavannoo honduvaru.
John 5:29 in English
- King James Version (KJV)
- And shall come forth; they that have done good, unto the resurrection of life; and they that have done evil, unto the resurrection of damnation.
- World English Bible (WEB)
- and will come out; those who have done good, to the resurrection of life; and those who have done evil, to the resurrection of judgment.
- American Standard Version (ASV)
- and shall come forth; they that have done good, unto the resurrection of life; and they that have done evil, unto the resurrection of judgment.
- Bible in Basic English (BBE)
- And they will come out; those who have done good, into the new life; and those who have done evil, to be judged.
- Darby Translation (DBY)
- and shall go forth; those that have practised good, to resurrection of life, and those that have done evil, to resurrection of judgment.
- Webster's Bible (WBS)
- And shall come forth; they that have done good to the resurrection of life; and they that have done evil, to the resurrection of damnation.
- Young's Literal Translation (YLT)
- and they shall come forth; those who did the good things to a rising again of life, and those who practised the evil things to a rising again of judgment.
Read in context
- 27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- 28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
- 29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- 30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- 31ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
Cross references
- Daniel 12:2–3 ದಾನಿಯೇಲನು 12:2–3ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು. ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Romans 2:6–10 ರೋಮಾಪುರದವರಿಗೆ 2:6–10ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- Acts 24:15 ಅಪೊಸ್ತಲರ ಕೃತ್ಯಗಳು 24:15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
- Matthew 25:31–46 ಮತ್ತಾಯನು 25:31–46ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Luke 14:14 ಲೂಕನು 14:14ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- Galatians 6:8–10 ಗಲಾತ್ಯದವರಿಗೆ 6:8–10ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು. ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 1 Timothy 6:18 1 ತಿಮೊಥೆಯನಿಗೆ 6:18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- 1 Peter 3:11 1 ಪೇತ್ರನು 3:11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.