John · chapter 5 · verse 30
John 5:30 in Kannada
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
Nannashtakke naane enoo maadalaarenu; naanu keluvanteye teerpu maaduttene mattu nanna teerpu nyaaya vaadaddu; yaakandare naanu nanna svantachittavannalla, aadare nannannu kaluhisida tandeya chittavu neravera bekendu apekshisuttene.
John 5:30 in English
- King James Version (KJV)
- I can of mine own self do nothing: as I hear, I judge: and my judgment is just; because I seek not mine own will, but the will of the Father which hath sent me.
- World English Bible (WEB)
- I can of myself do nothing. As I hear, I judge; and my judgment is righteous, because I don’t seek my own will, but the will of my Father who sent me.
- American Standard Version (ASV)
- I can of myself do nothing: as I hear, I judge: and my judgment is righteous; because I seek not mine own will, but the will of him that sent me.
- Bible in Basic English (BBE)
- Of myself I am unable to do anything: as the voice comes to me so I give a decision: and my decision is right because I have no desire to do what is pleasing to myself, but only what is pleasing to him who sent me.
- Darby Translation (DBY)
- I cannot do anything of myself; as I hear, I judge, and my judgment is righteous, because I do not seek my will, but the will of him that has sent me.
- Webster's Bible (WBS)
- I can of my own self do nothing: as I hear, I judge: and my judgment is just; because I seek not my own will, but the will of the Father who hath sent me.
- Young's Literal Translation (YLT)
- 'I am not able of myself to do anything; according as I hear I judge, and my judgment is righteous, because I seek not my own will, but the will of the Father who sent me.
Read in context
- 28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
- 29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- 30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
- 31ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
- 32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
Cross references
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- John 5:19 ಯೋಹಾನನು 5:19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- John 14:10 ಯೋಹಾನನು 14:10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- John 8:28 ಯೋಹಾನನು 8:28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
- Psalm 40:7–8 ಕೀರ್ತನೆಗಳು 40:7–8ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- John 8:15–16 ಯೋಹಾನನು 8:15–16ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ. ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
- Isaiah 11:3–4 ಯೆಶಾಯ 11:3–4ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Romans 15:3 ರೋಮಾಪುರದವರಿಗೆ 15:3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- John 8:50 ಯೋಹಾನನು 8:50ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
- John 17:4 ಯೋಹಾನನು 17:4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;