John · chapter 5 · verse 33
John 5:33 in Kannada
ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
Neevu yohaanana balige kaluhisidiri; avanu satyakke saakshikottanu.
John 5:33 in English
- King James Version (KJV)
- Ye sent unto John, and he bare witness unto the truth.
- World English Bible (WEB)
- You have sent to John, and he has testified to the truth.
- American Standard Version (ASV)
- Ye have sent unto John, and he hath borne witness unto the truth.
- Bible in Basic English (BBE)
- You sent to John and he gave true witness.
- Darby Translation (DBY)
- Ye have sent unto John, and he has borne witness to the truth.
- Webster's Bible (WBS)
- Ye sent to John, and he testified to the truth.
- Young's Literal Translation (YLT)
- ye have sent unto John, and he hath testified to the truth.
Read in context
- 31ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.
- 32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
- 33ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
- 34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
- 35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
Cross references
- John 1:6–8 ಯೋಹಾನನು 1:6–8ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
- John 3:26–36 ಯೋಹಾನನು 3:26–36ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು. ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- John 1:15–27 ಯೋಹಾನನು 1:15–27ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು. ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ. ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ. ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- John 1:29–34 ಯೋಹಾನನು 1:29–34ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.