John · chapter 6 · verse 20
John 6:20 in Kannada
ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
Aadare aatanu avarige--naane, bhayapadabediri andanu.
John 6:20 in English
- King James Version (KJV)
- But he saith unto them, It is I; be not afraid.
- World English Bible (WEB)
- But he said to them, “It is I. Don’t be afraid.”
- American Standard Version (ASV)
- But he saith unto them, It is I; be not afraid.
- Bible in Basic English (BBE)
- But he said to them, It is I, have no fear.
- Darby Translation (DBY)
- But he says to them, It is I: be not afraid.
- Webster's Bible (WBS)
- But he saith to them, It is I; be not afraid.
- Young's Literal Translation (YLT)
- and he saith to them, 'I am [he], be not afraid;'
Read in context
- 18ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
- 19ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
- 20ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
- 21ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
- 22ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
Cross references
- Matthew 14:27–31 ಮತ್ತಾಯನು 14:27–31ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು. ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Isaiah 44:8 ಯೆಶಾಯ 44:8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Mark 6:50 ಮಾರ್ಕನು 6:50ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- Mark 16:6 ಮಾರ್ಕನು 16:6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- Psalm 35:3 ಕೀರ್ತನೆಗಳು 35:3ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.