John · chapter 6 · verse 29
John 6:29 in Kannada
ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
Yesu pratyuttaravaagi avarige--devarakriye yaavadandare, aatanu kaluhisi kottaatanannu neevu nambuvade andanu.
John 6:29 in English
- King James Version (KJV)
- Jesus answered and said unto them, This is the work of God, that ye believe on him whom he hath sent.
- World English Bible (WEB)
- Jesus answered them, “This is the work of God, that you believe in him whom he has sent.”
- American Standard Version (ASV)
- Jesus answered and said unto them, This is the work of God, that ye believe on him whom he hath sent.
- Bible in Basic English (BBE)
- Jesus, answering, said to them, This is to do the work of God: to have faith in him whom God has sent.
- Darby Translation (DBY)
- Jesus answered and said to them, This is the work of God, that ye believe on him whom he has sent.
- Webster's Bible (WBS)
- Jesus answered and said to them, This is the work of God, that ye believe on him whom he hath sent.
- Young's Literal Translation (YLT)
- Jesus answered and said to them, 'This is the work of God, that ye may believe in him whom He did send.'
Read in context
- 27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- 28ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
- 29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- 30ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
- 31ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
Cross references
- 1 John 3:23 1 ಯೋಹಾನನು 3:23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Acts 16:31 ಅಪೊಸ್ತಲರ ಕೃತ್ಯಗಳು 16:31ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- Romans 4:4–5 ರೋಮಾಪುರದವರಿಗೆ 4:4–5ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- John 5:39 ಯೋಹಾನನು 5:39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- John 3:16–18 ಯೋಹಾನನು 3:16–18ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು. ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- Romans 9:30–31 ರೋಮಾಪುರದವರಿಗೆ 9:30–31ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.