John · chapter 6 · verse 35
John 6:35 in Kannada
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
Adakke yesu avarige--naane aa jeevada rotti; nanna balige baruvavanige endigoo hasiveyaaguvadilla mattu nanna mele nambike iduvavanige endigoo neeradikeyaaguvadilla.
John 6:35 in English
- King James Version (KJV)
- And Jesus said unto them, I am the bread of life: he that cometh to me shall never hunger; and he that believeth on me shall never thirst.
- World English Bible (WEB)
- Jesus said to them, “I am the bread of life. Whoever comes to me will not be hungry, and whoever believes in me will never be thirsty.
- American Standard Version (ASV)
- Jesus said unto them, I am the bread of life: he that cometh to me shall not hunger, and he that believeth on me shall never thirst.
- Bible in Basic English (BBE)
- And this was the answer of Jesus: I am the bread of life. He who comes to me will never be in need of food, and he who has faith in me will never be in need of drink.
- Darby Translation (DBY)
- [And] Jesus said to them, I am the bread of life: he that comes to me shall never hunger, and he that believes on me shall never thirst at any time.
- Webster's Bible (WBS)
- And Jesus said to them, I am the bread of life: he that cometh to me, shall never hunger; and he that believeth on me, shall never thirst.
- Young's Literal Translation (YLT)
- And Jesus said to them, 'I am the bread of the life; he who is coming unto me may not hunger, and he who is believing in me may not thirst — at any time;
Read in context
- 33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- 34ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
- 35ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
- 36ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
- 37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
Cross references
- John 6:48–58 ಯೋಹಾನನು 6:48–58ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- John 6:41 ಯೋಹಾನನು 6:41ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- John 7:37–38 ಯೋಹಾನನು 7:37–38ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- Revelation 7:16 ಪ್ರಕಟನೆ 7:16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Matthew 11:28 ಮತ್ತಾಯನು 11:28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
- John 4:13–14 ಯೋಹಾನನು 4:13–14ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು; ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- 1 Corinthians 11:23–29 1 ಕೊರಿಂಥದವರಿಗೆ 11:23–29ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು. ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- 1 Corinthians 10:16–18 1 ಕೊರಿಂಥದವರಿಗೆ 10:16–18ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ? ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ. ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?