John · chapter 6 · verse 44
John 6:44 in Kannada
ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
Nannannu kaluhisida tandeyu eleyada horatu yaavanoo nanna balige baralaaranu. Naanu avanannu kade dinadalli ebbisuvenu.
John 6:44 in English
- King James Version (KJV)
- No man can come to me, except the Father which hath sent me draw him: and I will raise him up at the last day.
- World English Bible (WEB)
- No one can come to me unless the Father who sent me draws him; and I will raise him up in the last day.
- American Standard Version (ASV)
- No man can come to me, except the Father that sent me draw him: and I will raise him up in the last day.
- Bible in Basic English (BBE)
- No man is able to come to me if the Father who sent me does not give him the desire to come: and I will take him up from the dead on the last day.
- Darby Translation (DBY)
- No one can come to me except the Father who has sent me draw him, and I will raise him up in the last day.
- Webster's Bible (WBS)
- No man can come to me, except the Father who hath sent me draw him: and I will raise him up at the last day.
- Young's Literal Translation (YLT)
- no one is able to come unto me, if the Father who sent me may not draw him, and I will raise him up in the last day;
Read in context
- 42ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
- 43ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.
- 44ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
- 45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- 46ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
Cross references
- John 6:65 ಯೋಹಾನನು 6:65ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
- Matthew 11:25–27 ಮತ್ತಾಯನು 11:25–27ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು. ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- John 6:39–40 ಯೋಹಾನನು 6:39–40ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Ephesians 2:4–10 ಎಫೆಸದವರಿಗೆ 2:4–10ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- John 12:32 ಯೋಹಾನನು 12:32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
- Matthew 16:17 ಮತ್ತಾಯನು 16:17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- John 6:45 ಯೋಹಾನನು 6:45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- Titus 3:3–5 ತೀತನಿಗೆ 3:3–5ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Jeremiah 31:3 ಯೆರೆಮೀಯ 31:3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- Hosea 11:4 ಹೋಶೇಯ 11:4ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.
- Colossians 2:12 ಕೊಲೊಸ್ಸೆಯವರಿಗೆ 2:12ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.