John · chapter 6 · verse 54
John 6:54 in Kannada
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
Yaavanu nanna maansavannu tindu nanna raktavannu kudiyuttaano avanu nityajeevavannu hondiddaane; naanu ava nannu kade dinadalli ebbisuvenu.
John 6:54 in English
- King James Version (KJV)
- Whoso eateth my flesh, and drinketh my blood, hath eternal life; and I will raise him up at the last day.
- World English Bible (WEB)
- He who eats my flesh and drinks my blood has eternal life, and I will raise him up at the last day.
- American Standard Version (ASV)
- He that eateth my flesh and drinketh my blood hath eternal life; and I will raise him up at the last day.
- Bible in Basic English (BBE)
- He who takes my flesh for food and my blood for drink has eternal life: and I will take him up from the dead at the last day.
- Darby Translation (DBY)
- He that eats my flesh and drinks my blood has life eternal, and I will raise him up at the last day:
- Webster's Bible (WBS)
- Whoever eateth my flesh, and drinketh my blood, hath eternal life; and I will raise him up at the last day.
- Young's Literal Translation (YLT)
- he who is eating my flesh, and is drinking my blood, hath life age-during, and I will raise him up in the last day;
Read in context
- 52ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
- 53ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
- 54ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
- 55ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
- 56ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
Cross references
- John 6:39–40 ಯೋಹಾನನು 6:39–40ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Philippians 3:7–10 ಫಿಲಿಪ್ಪಿಯವರಿಗೆ 3:7–10ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ. ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Proverbs 9:4–6 ಜ್ಞಾನೋಕ್ತಿಗಳು 9:4–6ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Psalm 22:26 ಕೀರ್ತನೆಗಳು 22:26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- John 6:47 ಯೋಹಾನನು 6:47ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Isaiah 25:6–8 ಯೆಶಾಯ 25:6–8ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು. ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು. ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.