John · chapter 6 · verse 67
John 6:67 in Kannada
ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
Aaga yesu hanne radu mandige--neevu saha horatu hogabekem diddeero endu kelalu
John 6:67 in English
- King James Version (KJV)
- Then said Jesus unto the twelve, Will ye also go away?
- World English Bible (WEB)
- Jesus said therefore to the twelve, “You don’t also want to go away, do you?”
- American Standard Version (ASV)
- Jesus said therefore unto the twelve, Would ye also go away?
- Bible in Basic English (BBE)
- So Jesus said to the twelve, Have you a desire to go away?
- Darby Translation (DBY)
- Jesus therefore said to the twelve, Will ye also go away?
- Webster's Bible (WBS)
- Then said Jesus to the twelve, Will ye also go away?
- Young's Literal Translation (YLT)
- Jesus, therefore, said to the twelve, 'Do ye also wish to go away?'
Read in context
- 65ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
- 66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
- 67ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
- 68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- 69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
Cross references
- Luke 14:25–33 ಲೂಕನು 14:25–33ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ-- ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ? ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ-- ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು. ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ? ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- John 6:70 ಯೋಹಾನನು 6:70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Ruth 1:11–18 ರೂತಳು 1:11–18ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ! ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು. ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು. ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು. ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು. ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
- Joshua 24:15–22 ಯೆಹೋಶುವ 24:15–22ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು. ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು. ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- 2 Samuel 15:19–20 2 ಸಮುವೇಲನು 15:19–20ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು. ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.