John · chapter 7 · verse 15
John 7:15 in Kannada
ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
Yehoo dyaru aashcharyapattu--enannoo kaliyadiruva ee manushyanige intha jnyaanavu bandiruvadu hege andaru.
John 7:15 in English
- King James Version (KJV)
- And the Jews marvelled, saying, How knoweth this man letters, having never learned?
- World English Bible (WEB)
- The Jews therefore marveled, saying, “How does this man know letters, having never been educated?”
- American Standard Version (ASV)
- The Jews therefore marvelled, saying, How knoweth this man letters, having never learned?
- Bible in Basic English (BBE)
- Then the Jews were surprised and said, How has this man got knowledge of books? He has never been to school.
- Darby Translation (DBY)
- The Jews therefore wondered, saying, How knows this [man] letters, having never learned?
- Webster's Bible (WBS)
- And the Jews marveled, saying, How knoweth this man letters, having never learned?
- Young's Literal Translation (YLT)
- and the Jews were wondering, saying, 'How hath this one known letters — not having learned?'
Read in context
- 13ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- 14ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
- 15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
- 16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
- 17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
Cross references
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- Matthew 13:54 ಮತ್ತಾಯನು 13:54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
- Matthew 7:28–29 ಮತ್ತಾಯನು 7:28–29ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Acts 26:24 ಅಪೊಸ್ತಲರ ಕೃತ್ಯಗಳು 26:24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
- John 7:46 ಯೋಹಾನನು 7:46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- Matthew 22:22 ಮತ್ತಾಯನು 22:22ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
- Luke 2:47 ಲೂಕನು 2:47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
- John 1:19 ಯೋಹಾನನು 1:19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
- Acts 2:7–13 ಅಪೊಸ್ತಲರ ಕೃತ್ಯಗಳು 2:7–13ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು. ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
- Mark 6:2–3 ಮಾರ್ಕನು 6:2–3ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು? ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- Matthew 22:33 ಮತ್ತಾಯನು 22:33ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
- Amos 7:14–15 ಆಮೋಸ 7:14–15ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.