John · chapter 7 · verse 6
John 7:6 in Kannada
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
Taruvaaya yesu avarige-- nanna samayavu innoo bandilla; aadare nimma samayavu yaavaagaloo siddhavaagide.
John 7:6 in English
- King James Version (KJV)
- Then Jesus said unto them, My time is not yet come: but your time is alway ready.
- World English Bible (WEB)
- Jesus therefore said to them, “My time has not yet come, but your time is always ready.
- American Standard Version (ASV)
- Jesus therefore saith unto them, My time is not yet come; but your time is always ready.
- Bible in Basic English (BBE)
- Jesus said to them, My time is still to come, but any time is good for you.
- Darby Translation (DBY)
- Jesus therefore says to them, My time is not yet come, but your time is always ready.
- Webster's Bible (WBS)
- Then Jesus said to them, My time is not yet come: but your time is always ready.
- Young's Literal Translation (YLT)
- Jesus, therefore, saith to them, 'My time is not yet present, but your time is always ready;
Read in context
- 4ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- 5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- 6ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
- 7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- 8ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
Cross references
- John 7:8 ಯೋಹಾನನು 7:8ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
- John 2:4 ಯೋಹಾನನು 2:4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- John 7:30 ಯೋಹಾನನು 7:30ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- John 8:20 ಯೋಹಾನನು 8:20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
- Matthew 26:18 ಮತ್ತಾಯನು 26:18ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Psalm 102:13 ಕೀರ್ತನೆಗಳು 102:13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- Ecclesiastes 3:1–15 ಪ್ರಸಂಗಿ 3:1–15ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ. ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ; ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ; ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ; ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ; ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ; ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ; ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ. ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ? ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ. ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ. ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು. ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ. ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ. ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.