John · chapter 8 · verse 18
John 8:18 in Kannada
ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
Nanna vishayavaagi naane saakshi koduttene mattu nannannu kaluhisida tandeyoo nanna vishayavaagi saakshikoduttaane andanu.
John 8:18 in English
- King James Version (KJV)
- I am one that bear witness of myself, and the Father that sent me beareth witness of me.
- World English Bible (WEB)
- I am one who testifies about myself, and the Father who sent me testifies about me.”
- American Standard Version (ASV)
- I am he that beareth witness of myself, and the Father that sent me beareth witness of me.
- Bible in Basic English (BBE)
- I give witness about myself and the Father who sent me gives witness about me.
- Darby Translation (DBY)
- I am [one] who bear witness concerning myself, and the Father who has sent me bears witness concerning me.
- Webster's Bible (WBS)
- I am one that testifieth concerning myself; and the Father that sent me, testifieth concerning me.
- Young's Literal Translation (YLT)
- I am [one] who is testifying of myself, and the Father who sent me doth testify of me.'
Read in context
- 16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
- 17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
- 18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
- 19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- 20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
Cross references
- John 8:38 ಯೋಹಾನನು 8:38ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- John 8:58 ಯೋಹಾನನು 8:58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- 1 John 5:6–12 1 ಯೋಹಾನನು 5:6–12ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ. ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ. ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ. ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- John 8:25 ಯೋಹಾನನು 8:25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
- John 5:31–40 ಯೋಹಾನನು 5:31–40ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ. ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ; ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ. ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ. ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ. ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.