John · chapter 8 · verse 24
John 8:24 in Kannada
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
Aadadarinda neevu nimma paapagalalliye saayuviri endu naanu nimage helidenu. Yaakandare nannannu aatanendu neevu nambade hodare neevu nimma paapagalalliye saayuviri endu helidanu.
John 8:24 in English
- King James Version (KJV)
- I said therefore unto you, that ye shall die in your sins: for if ye believe not that I am [he], ye shall die in your sins.
- World English Bible (WEB)
- I said therefore to you that you will die in your sins; for unless you believe that I am he, you will die in your sins.”
- American Standard Version (ASV)
- I said therefore unto you, that ye shall die in your sins: for except ye believe that I am [he], ye shall die in your sins.
- Bible in Basic English (BBE)
- For this reason I said to you that death will overtake you in your sins: for if you have not faith that I am he, death will come to you while you are in your sins.
- Darby Translation (DBY)
- I said therefore to you, that ye shall die in your sins; for unless ye shall believe that I am [he], ye shall die in your sins.
- Webster's Bible (WBS)
- I said therefore to you, that ye will die in your sins: for if ye believe not that I am [he] , ye will die in your sins.
- Young's Literal Translation (YLT)
- I said, therefore, to you, that ye shall die in your sins, for if ye may not believe that I am [he], ye shall die in your sins.'
Read in context
- 22ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
- 23ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
- 24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- 25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
- 26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
Cross references
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- John 3:18 ಯೋಹಾನನು 3:18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- Hebrews 10:26–29 ಇಬ್ರಿಯರಿಗೆ 10:26–29ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- John 13:19 ಯೋಹಾನನು 13:19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
- John 4:26 ಯೋಹಾನನು 4:26ಯೇಸು ಆಕೆಗೆ--ನಿನ್ನೊಂದಿಗೆ ಮಾತನಾಡುವ ನಾನೇ ಆತನು ಅಂದನು.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
- Mark 13:6 ಮಾರ್ಕನು 13:6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.