John · chapter 8 · verse 25
John 8:25 in Kannada
ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
Taruvaaya avaru aatanige--neenu yaaraagiddee andaru. Adakke yesu avarige--modalinindaloo naanu nimage helidantavane.
John 8:25 in English
- King James Version (KJV)
- Then said they unto him, Who art thou? And Jesus saith unto them, Even [the same] that I said unto you from the beginning.
- World English Bible (WEB)
- They said therefore to him, “Who are you?” Jesus said to them, “Just what I have been saying to you from the beginning.
- American Standard Version (ASV)
- They said therefore unto him, Who art thou? Jesus said unto them, Even that which I have also spoken unto you from the beginning.
- Bible in Basic English (BBE)
- Then they said to him, Who are you? Jesus said, What I said to you from the first.
- Darby Translation (DBY)
- They said therefore to him, Who art thou? [And] Jesus said to them, Altogether that which I also say to you.
- Webster's Bible (WBS)
- Then said they to him, Who art thou? And Jesus saith to them, Even [the same] that I said to you from the beginning.
- Young's Literal Translation (YLT)
- They said, therefore, to him, 'Thou — who art thou?' and Jesus said to them, 'Even what I did speak of to you at the beginning;
Read in context
- 23ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.
- 24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- 25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
- 26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
- 27ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
Cross references
- John 5:17–29 ಯೋಹಾನನು 5:17–29ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು. ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Luke 22:67 ಲೂಕನು 22:67ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- John 1:22 ಯೋಹಾನನು 1:22ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
- John 19:9 ಯೋಹಾನನು 19:9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
- John 10:24 ಯೋಹಾನನು 10:24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
- John 1:19 ಯೋಹಾನನು 1:19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.