John · chapter 8 · verse 26
John 8:26 in Kannada
ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
Nimma vishayavaagi heluvadakkoo teerpumaaduvadakkoo nanage aneka vishayagalive. Aadare nannannu kaluhisidaatanu satyavantanu. Naanu aataninda kelidavugalanne lokakke heluttene andanu.
John 8:26 in English
- King James Version (KJV)
- I have many things to say and to judge of you: but he that sent me is true; and I speak to the world those things which I have heard of him.
- World English Bible (WEB)
- I have many things to speak and to judge concerning you. However, he who sent me is true; and the things which I heard from him, these I say to the world.”
- American Standard Version (ASV)
- I have many things to speak and to judge concerning you: howbeit he that sent me is true; and the things which I heard from him, these speak I unto the world.
- Bible in Basic English (BBE)
- I have much to say about you and against you: but he who sent me is true and what he has said to me I say to the world.
- Darby Translation (DBY)
- I have many things to say and to judge concerning you, but he that has sent me is true, and I, what I have heard from him, these things I say to the world.
- Webster's Bible (WBS)
- I have many things to say, and to judge of you: but he that sent me, is true: and I speak to the world those things which I have heard from him.
- Young's Literal Translation (YLT)
- many things I have to speak concerning you and to judge, but He who sent me is true, and I — what things I heard from Him — these I say to the world.'
Read in context
- 24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- 25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
- 26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
- 27ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
- 28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
Cross references
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- John 12:47–50 ಯೋಹಾನನು 12:47–50ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು. ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 8:40 ಯೋಹಾನನು 8:40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
- John 7:28 ಯೋಹಾನನು 7:28ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- John 17:8 ಯೋಹಾನನು 17:8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
- John 5:42–43 ಯೋಹಾನನು 5:42–43ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
- Hebrews 5:11–12 ಇಬ್ರಿಯರಿಗೆ 5:11–12ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- John 3:32–33 ಯೋಹಾನನು 3:32–33ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
- 2 Corinthians 1:18 2 ಕೊರಿಂಥದವರಿಗೆ 1:18ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
- John 16:12 ಯೋಹಾನನು 16:12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- John 7:16 ಯೋಹಾನನು 7:16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
- John 9:39–41 ಯೋಹಾನನು 9:39–41ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು. ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು. ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.