John · chapter 8 · verse 33
John 8:33 in Kannada
ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
Adakke avaru pratyuttaravaagi aatanige--naavu abrahaamana santatiyavaraagiralaagi yaava manushyanigoo endigoo gulaamaraagiralilla; haagaadare--nimage bidugadeyaaguvadendu neenu hege heluttee andaru.
John 8:33 in English
- King James Version (KJV)
- They answered him, We be Abraham’s seed, and were never in bondage to any man: how sayest thou, Ye shall be made free?
- World English Bible (WEB)
- They answered him, “We are Abraham’s offspring, and have never been in bondage to anyone. How do you say, ‘You will be made free’?”
- American Standard Version (ASV)
- They answered unto him, We are Abraham’s seed, and have never yet been in bondage to any man: how sayest thou, Ye shall be made free?
- Bible in Basic English (BBE)
- They said to him in answer, We are Abraham's seed and have never been any man's servant: why do you say, You will become free?
- Darby Translation (DBY)
- They answered him, We are Abraham's seed, and have never been under bondage to any one; how sayest thou, Ye shall become free?
- Webster's Bible (WBS)
- They answered him, We are Abraham's offspring, and were never in bondage to any man: how sayest thou, Ye shall be made free?
- Young's Literal Translation (YLT)
- They answered him, 'Seed of Abraham we are; and to no one have we been servants at any time; how dost thou say — Ye shall become free?'
Read in context
- 31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- 32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- 33ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
- 34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
- 35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
Cross references
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- John 8:39 ಯೋಹಾನನು 8:39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
- Nehemiah 5:4–8 ನೆಹೆಮೀಯ 5:4–8ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು. ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು. ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು. ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
- John 8:37 ಯೋಹಾನನು 8:37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Nehemiah 9:27–28 ನೆಹೆಮೀಯ 9:27–28ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
- Exodus 1:13–14 ವಿಮೋಚನಕಾಂಡ 1:13–14ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Ezra 9:9 ಎಜ್ರನು 9:9ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
- Judges 3:8 ನ್ಯಾಯಸ್ಥಾಪಕರು 3:8ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
- Nehemiah 9:36–37 ನೆಹೆಮೀಯ 9:36–37ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Luke 16:24–26 ಲೂಕನು 16:24–26ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
Original words (Greek)
- answered · G611ἀποκρίνομαι apokrínomai
- him · G846αὐτός autós
- be · G2070ἐσμέν esmén
- Abraham’s · G11Ἀβραάμ Abraám
- seed · G4690σπέρμα spérma
- and · G2532καί kaí
- were · G1398δουλεύω douleúō
- never · G4455πώποτε pṓpote
- bondage · G1398δουλεύω douleúō
- man · G3762οὐδείς oudeís
- how · G4459πῶς pōs
- sayest · G3004λέγω légō
- thou · G4771σύ sý
- made · G1096γίνομαι gínomai
- free · G1658ἐλεύθερος eleútheros