John · chapter 8 · verse 35
John 8:35 in Kannada
ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
Gulaamanu maneyalli yaavaagaloo iruvadilla; aadare maganu yaavaagaloo iruttaane.
John 8:35 in English
- King James Version (KJV)
- And the servant abideth not in the house for ever: [but] the Son abideth ever.
- World English Bible (WEB)
- A bondservant doesn’t live in the house forever. A son remains forever.
- American Standard Version (ASV)
- And the bondservant abideth not in the house for ever: the son abideth for ever.
- Bible in Basic English (BBE)
- Now the servant does not go on living in the house for ever, but the son does.
- Darby Translation (DBY)
- Now the bondman abides not in the house for ever: the son abides for ever.
- Webster's Bible (WBS)
- And the servant abideth not in the house for ever, [but] the Son abideth for ever.
- Young's Literal Translation (YLT)
- and the servant doth not remain in the house — to the age, the son doth remain — to the age;
Read in context
- 33ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
- 34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
- 35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
- 36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- 37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
Cross references
- Galatians 4:4–7 ಗಲಾತ್ಯದವರಿಗೆ 4:4–7ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- Luke 15:31 ಲೂಕನು 15:31ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Romans 8:15–17 ರೋಮಾಪುರದವರಿಗೆ 8:15–17ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Genesis 21:10 ಆದಿಕಾಂಡ 21:10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- Galatians 4:30–31 ಗಲಾತ್ಯದವರಿಗೆ 4:30–31ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- Ezekiel 46:17 ಯೆಹೆಜ್ಕೇಲನು 46:17ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
- Hebrews 3:5–6 ಇಬ್ರಿಯರಿಗೆ 3:5–6ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- 1 Peter 1:2–5 1 ಪೇತ್ರನು 1:2–5ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- John 14:19–20 ಯೋಹಾನನು 14:19–20ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
- Matthew 21:41–43 ಮತ್ತಾಯನು 21:41–43ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Romans 8:29–30 ರೋಮಾಪುರದವರಿಗೆ 8:29–30ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Colossians 3:3 ಕೊಲೊಸ್ಸೆಯವರಿಗೆ 3:3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.