John · chapter 8 · verse 43
John 8:43 in Kannada
ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
Neevu nanna maatannu yaake grahi sade iddeeri? Neevu nanna vaakyavannu kelade iruvadarindale.
John 8:43 in English
- King James Version (KJV)
- Why do ye not understand my speech? [even] because ye cannot hear my word.
- World English Bible (WEB)
- Why don’t you understand my speech? Because you can’t hear my word.
- American Standard Version (ASV)
- Why do ye not understand my speech? [Even] because ye cannot hear my word.
- Bible in Basic English (BBE)
- Why are my words not clear to you? It is because your ears are shut to my teaching.
- Darby Translation (DBY)
- Why do ye not know my speech? Because ye cannot hear my word.
- Webster's Bible (WBS)
- Why do ye not understand my speech? [even] because ye cannot hear my word.
- Young's Literal Translation (YLT)
- wherefore do ye not know my speech? because ye are not able to hear my word.
Read in context
- 41ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
- 42ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
- 43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
- 44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 45ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
Cross references
- John 12:39–40 ಯೋಹಾನನು 12:39–40ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- John 5:43 ಯೋಹಾನನು 5:43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
- Proverbs 28:5 ಜ್ಞಾನೋಕ್ತಿಗಳು 28:5ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
- Jeremiah 6:10 ಯೆರೆಮೀಯ 6:10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- John 6:60 ಯೋಹಾನನು 6:60ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
- John 8:27 ಯೋಹಾನನು 8:27ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
- Isaiah 6:9 ಯೆಶಾಯ 6:9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
- Isaiah 44:18 ಯೆಶಾಯ 44:18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
- Micah 4:12 ಮೀಕ 4:12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.