John · chapter 9 · verse 29
John 9:29 in Kannada
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
Mosheya sangada devaru maatanaadidanendu naavu ballevu; aadare ivanu elliyavano namage gottilla andaru.
John 9:29 in English
- King James Version (KJV)
- We know that God spake unto Moses: [as for] this [fellow], we know not from whence he is.
- World English Bible (WEB)
- We know that God has spoken to Moses. But as for this man, we don’t know where he comes from.”
- American Standard Version (ASV)
- We know that God hath spoken unto Moses: but as for this man, we know not whence he is.
- Bible in Basic English (BBE)
- We are certain that God gave his word to Moses: but as for this man, we have no knowledge where he comes from.
- Darby Translation (DBY)
- We know that God spoke to Moses; but [as to] this [man], we know not whence he is.
- Webster's Bible (WBS)
- We know that God spoke to Moses: [as for] this [man] , we know not whence he is.
- Young's Literal Translation (YLT)
- we have known that God hath spoken to Moses, but this one — we have not known whence he is.'
Read in context
- 27ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
- 28ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
- 29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
- 30ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
- 31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
Cross references
- John 8:14 ಯೋಹಾನನು 8:14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.
- John 7:41–42 ಯೋಹಾನನು 7:41–42ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ? ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- John 7:27 ಯೋಹಾನನು 7:27ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
- Numbers 12:2–7 ಅರಣ್ಯಕಾಂಡ 12:2–7ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು. (ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.) ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ. ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು. ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು. ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- Acts 7:35 ಅಪೊಸ್ತಲರ ಕೃತ್ಯಗಳು 7:35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- 2 Kings 9:11 2 ಅರಸುಗಳು 9:11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
- Psalm 105:26 ಕೀರ್ತನೆಗಳು 105:26ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
- Psalm 106:16 ಕೀರ್ತನೆಗಳು 106:16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
- Hebrews 3:2–5 ಇಬ್ರಿಯರಿಗೆ 3:2–5ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
- Acts 22:22 ಅಪೊಸ್ತಲರ ಕೃತ್ಯಗಳು 22:22ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- Malachi 4:4 ಮಲಾಕಿಯ 4:4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- John 9:24 ಯೋಹಾನನು 9:24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.