John · chapter 9 · verse 3
John 9:3 in Kannada
ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
Yesu pratyuttaravaagi--ee manushyanaagali illave ivana tandetaayigalaagali paapamaadalilla; aadare devara kriyegalu ivanalli prakatavaaguvadakkaa giye idaayitu.
John 9:3 in English
- King James Version (KJV)
- Jesus answered, Neither hath this man sinned, nor his parents: but that the works of God should be made manifest in him.
- World English Bible (WEB)
- Jesus answered, “This man didn’t sin, nor did his parents, but that the works of God might be revealed in him.
- American Standard Version (ASV)
- Jesus answered, Neither did this man sin, nor his parents: but that the works of God should be made manifest in him.
- Bible in Basic English (BBE)
- Jesus said in answer, It was not because of his sin, or because of his father's or mother's; it was so that the works of God might be seen openly in him.
- Darby Translation (DBY)
- Jesus answered, Neither has this [man] sinned nor his parents, but that the works of God should be manifested in him.
- Webster's Bible (WBS)
- Jesus answered, Neither hath this man sinned, nor his parents: but that the works of God should be made manifest in him.
- Young's Literal Translation (YLT)
- Jesus answered, 'Neither did this one sin nor his parents, but that the works of God may be manifested in him;
Read in context
- 1ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
- 2ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
- 3ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
- 4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- 5ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
Cross references
- John 11:4 ಯೋಹಾನನು 11:4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Job 2:3–6 ಯೋಬನು 2:3–6ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- Ecclesiastes 9:1–2 ಪ್ರಸಂಗಿ 9:1–2ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Job 42:7 ಯೋಬನು 42:7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- Acts 4:21 ಅಪೊಸ್ತಲರ ಕೃತ್ಯಗಳು 4:21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Acts 28:4 ಅಪೊಸ್ತಲರ ಕೃತ್ಯಗಳು 28:4ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
- Job 1:8–12 ಯೋಬನು 1:8–12ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು. ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ? ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- John 14:11–13 ಯೋಹಾನನು 14:11–13ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ. ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- Job 22:5–30 ಯೋಬನು 22:5–30ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ. ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ. ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ. ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ. ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ. ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ. ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು. ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ. ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು. ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ. ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ. ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು. ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ. ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ. ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು. ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು. ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.