Jonah · chapter 1 · verse 12
Jonah 1:12 in Kannada
ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
Avanu ava rige--nannannu etti samudradalli haakiri, aaga samudravu nimage shaantavaaguvadu; nanna nimitta ee dodda birugaali nimma mele bantendu ballenu andanu.
Jonah 1:12 in English
- King James Version (KJV)
- And he said unto them, Take me up, and cast me forth into the sea; so shall the sea be calm unto you: for I know that for my sake this great tempest [is] upon you.
- World English Bible (WEB)
- He said to them, “Take me up, and throw me into the sea. Then the sea will be calm for you; for I know that because of me this great storm is on you.”
- American Standard Version (ASV)
- And he said unto them, Take me up, and cast me forth into the sea; so shall the sea be calm unto you: for I know that for my sake this great tempest is upon you.
- Bible in Basic English (BBE)
- And he said to them, Take me up and put me into the sea, and the sea will become calm for you: for I am certain that because of me this great storm has come on you.
- Darby Translation (DBY)
- And he said unto them, Take me up, and cast me forth into the sea; so shall the sea be calm unto you: for I know that because of me this great tempest is upon you.
- Webster's Bible (WBS)
- And he said to them, Take me, and cast me into the sea; so shall the sea be calm to you: for I know that for my sake this great tempest [is] upon you.
- Young's Literal Translation (YLT)
- And he saith unto them, 'Lift me up, and cast me into the sea, and the sea doth cease from you; for I know that on my account this great tempest [is] upon you.'
Read in context
- 10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
- 11ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.
- 12ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
- 13ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.
- 14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
Cross references
- 2 Samuel 24:17 2 ಸಮುವೇಲನು 24:17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- 1 Chronicles 21:17 1 ಪೂರ್ವಕಾಲವೃತ್ತಾಂತ 21:17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
- Joshua 7:12 ಯೆಹೋಶುವ 7:12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- John 11:50 ಯೋಹಾನನು 11:50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Ecclesiastes 9:18 ಪ್ರಸಂಗಿ 9:18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- Joshua 7:20–21 ಯೆಹೋಶುವ 7:20–21ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.