Jonah · chapter 1 · verse 2
Jonah 1:2 in Kannada
ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
Hegandare--eddu aa dodda pattanavaada ninevege hogi adakke virodhavaagi koogu; avara kettatanavu nanna sannidhige muttide embadu.
Jonah 1:2 in English
- King James Version (KJV)
- Arise, go to Nineveh, that great city, and cry against it; for their wickedness is come up before me.
- World English Bible (WEB)
- “Arise, go to Nineveh, that great city, and preach against it, for their wickedness has come up before me.”
- American Standard Version (ASV)
- Arise, go to Nineveh, that great city, and cry against it; for their wickedness is come up before me.
- Bible in Basic English (BBE)
- Up! go to Nineveh, that great town, and let your voice come to it; for their evil-doing has come up before me.
- Darby Translation (DBY)
- Arise, go to Nineveh, the great city, and cry against it; for their wickedness is come up before me.
- Webster's Bible (WBS)
- Arise, go to Nineveh, that great city, and cry against it; for their wickedness is come up before me.
- Young's Literal Translation (YLT)
- 'Rise, go unto Nineveh, the great city, and proclaim against it that their wickedness hath come up before Me.'
Read in context
- 1ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
- 2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- 3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- 4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
Cross references
- Genesis 18:20–21 ಆದಿಕಾಂಡ 18:20–21ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- Genesis 10:11 ಆದಿಕಾಂಡ 10:11ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Jonah 3:2 ಯೋನ 3:2ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
- Zephaniah 2:13–15 ಚೆಫನ್ಯ 2:13–15ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು. ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು. ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Jonah 4:11 ಯೋನ 4:11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
- Revelation 18:5 ಪ್ರಕಟನೆ 18:5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
- Ezekiel 3:5–9 ಯೆಹೆಜ್ಕೇಲನು 3:5–9ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ. ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ. ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- Jeremiah 1:7–10 ಯೆರೆಮೀಯ 1:7–10ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು. ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು. ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- 2 Kings 19:36 2 ಅರಸುಗಳು 19:36ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.