Jonah · chapter 1 · verse 9
Jonah 1:9 in Kannada
ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
Ninna desha yaavadu, neenu yaava janaangadavanu, namage tilisu andaru. Avanu avarige--naanu ibriyanu; samudravannoo onagida bhoomiyannoo untumaadida para lokada devaraada kartanige bhayapaduvava naagiddenendu helidanu.
Jonah 1:9 in English
- King James Version (KJV)
- And he said unto them, I [am] an Hebrew; and I fear the LORD, the God of heaven, which hath made the sea and the dry [land].
- World English Bible (WEB)
- He said to them, “I am a Hebrew, and I fear the LORD, the God of heaven, who has made the sea and the dry land.”
- American Standard Version (ASV)
- And he said unto them, I am a Hebrew; and I fear Jehovah, the God of heaven, who hath made the sea and the dry land.
- Bible in Basic English (BBE)
- And he said to them, I am a Hebrew, a worshipper of the Lord, the God of heaven, who made the sea and the dry land.
- Darby Translation (DBY)
- And he said unto them, I am a Hebrew, and I fear Jehovah, the God of the heavens, who hath made the sea and the dry [land].
- Webster's Bible (WBS)
- And he said to them, I [am] a Hebrew; and I fear the LORD, the God of heaven, who hath made the sea and the dry [land] .
- Young's Literal Translation (YLT)
- And he saith unto them, 'A Hebrew I [am], and Jehovah, God of the heavens, I am reverencing, who made the sea and the dry land.'
Read in context
- 7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- 8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
- 9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
- 10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
- 11ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.
Cross references
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Psalm 136:26 ಕೀರ್ತನೆಗಳು 136:26ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 95:5–6 ಕೀರ್ತನೆಗಳು 95:5–6ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು. ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Nehemiah 9:6 ನೆಹೆಮೀಯ 9:6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
- Nehemiah 1:4 ನೆಹೆಮೀಯ 1:4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- Genesis 14:13 ಆದಿಕಾಂಡ 14:13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
- Daniel 2:18–19 ದಾನಿಯೇಲನು 2:18–19ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು. ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- Job 1:9 ಯೋಬನು 1:9ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- 2 Kings 17:32–35 2 ಅರಸುಗಳು 17:32–35ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು. ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ. ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
- 2 Kings 17:25 2 ಅರಸುಗಳು 17:25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.