Jonah · chapter 2 · verse 6
Jonah 2:6 in Kannada
ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
Bettagala budada tanaka ilidu hodenu; bhoomiya addadandegalu nityavaagi nanna suttali ddavu; aadaagyoo o devaraada nanna kartane, neenu nanna praanavannu naashanadolaginda ebbisiddee.
Jonah 2:6 in English
- King James Version (KJV)
- I went down to the bottoms of the mountains; the earth with her bars [was] about me for ever: yet hast thou brought up my life from corruption, O LORD my God.
- World English Bible (WEB)
- I went down to the bottoms of the mountains. The earth barred me in forever; yet you have brought my life up from the pit, LORD my God.
- American Standard Version (ASV)
- I went down to the bottoms of the mountains; The earth with its bars [closed] upon me for ever: Yet hast thou brought up my life from the pit, O Jehovah my God.
- Bible in Basic English (BBE)
- I went down to the bases of the mountains; as for the earth, her walls were about me for ever: but you have taken up my life from the underworld, O Lord my God.
- Darby Translation (DBY)
- I went down to the bottoms of the mountains; The bars of the earth [closed] upon me for ever: But thou hast brought up my life from the pit, O Jehovah my God.
- Webster's Bible (WBS)
- I went down to the bottoms of the mountains; the earth with her bars [was] about me for ever: yet hast thou brought up my life from corruption, O LORD my God.
- Young's Literal Translation (YLT)
- To the cuttings of mountains I have come down, The earth, her bars [are] behind me to the age. And Thou bringest up from the pit my life, O Jehovah my God.
Read in context
- 4ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
- 5ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
- 6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
- 7ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
- 8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
Cross references
- Psalm 30:3 ಕೀರ್ತನೆಗಳು 30:3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Isaiah 38:17 ಯೆಶಾಯ 38:17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Proverbs 8:25–29 ಜ್ಞಾನೋಕ್ತಿಗಳು 8:25–29ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Job 33:24 ಯೋಬನು 33:24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- Psalm 104:6 ಕೀರ್ತನೆಗಳು 104:6ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Job 33:28 ಯೋಬನು 33:28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.