Joshua · chapter 1 · verse 5
Joshua 1:5 in Kannada
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
Aadare neenu jeevisuva divasagalallellaa yaavanoo ninna munde nillalaaranu. Naanu mosheya sangada idda haageye ninna sangada iruvenu. Naanu ninnannu kaibiduvudilla, illave ninnannu toreyuvadilla.
Joshua 1:5 in English
- King James Version (KJV)
- There shall not any man be able to stand before thee all the days of thy life: as I was with Moses, [so] I will be with thee: I will not fail thee, nor forsake thee.
- World English Bible (WEB)
- No man will be able to stand before you all the days of your life. As I was with Moses, so I will be with you. I will not fail you nor forsake you.
- American Standard Version (ASV)
- There shall not any man be able to stand before thee all the days of thy life: as I was with Moses, so I will be with thee; I will not fail thee, nor forsake thee.
- Bible in Basic English (BBE)
- While you are living, all will give way before you: as I was with Moses, so I will be with you; I will not take away my help from you or give you up.
- Darby Translation (DBY)
- None shall be able to stand before thee all the days of thy life: as I was with Moses, so will I be with thee; I will not leave thee, neither will I forsake thee.
- Webster's Bible (WBS)
- There shall not any man be able to stand before thee all the days of thy life: as I was with Moses, [so] I will be with thee: I will not fail thee, nor forsake thee.
- Young's Literal Translation (YLT)
- 'No man doth station himself before thee all days of thy life; as I have been with Moses, I am with thee, I do not fail thee, nor forsake thee;
Read in context
- 3ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
- 4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
- 5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- 6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
- 7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
Cross references
- Deuteronomy 31:6–8 ಧರ್ಮೋಪದೇಶಕಾಂಡ 31:6–8ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು. ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Isaiah 41:10–14 ಯೆಶಾಯ 41:10–14ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- Deuteronomy 20:4 ಧರ್ಮೋಪದೇಶಕಾಂಡ 20:4ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Joshua 3:7 ಯೆಹೋಶುವ 3:7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
- Isaiah 43:2–5 ಯೆಶಾಯ 43:2–5ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು. ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು. ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
- Exodus 3:12 ವಿಮೋಚನಕಾಂಡ 3:12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.