Joshua · chapter 1 · verse 9
Joshua 1:9 in Kannada
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
Ninage aajnyaa pisiddenallaa; balavaagiru, olle dhairyadindiru; bhayapadabeda, niraashegollabeda. Neenu hogu vallellaa ninna devaraada kartanu ninna sangada iddaane endu helidanu.
Joshua 1:9 in English
- King James Version (KJV)
- Have not I commanded thee? Be strong and of a good courage; be not afraid, neither be thou dismayed: for the LORD thy God [is] with thee whithersoever thou goest.
- World English Bible (WEB)
- Haven’t I commanded you? Be strong and courageous. Don’t be afraid. Don’t be dismayed, for the LORD your God is with you wherever you go.”
- American Standard Version (ASV)
- Have not I commanded thee? Be strong and of good courage; be not affrighted, neither be thou dismayed: for Jehovah thy God is with thee whithersoever thou goest.
- Bible in Basic English (BBE)
- Have I not given you your orders? Take heart and be strong; have no fear and do not be troubled; for the Lord your God is with you wherever you go,
- Darby Translation (DBY)
- Have I not commanded thee: Be strong and courageous? Be not afraid, neither be dismayed; for Jehovah thy God is with thee whithersoever thou goest.
- Webster's Bible (WBS)
- Have not I commanded thee? Be strong and of a good courage; be not afraid, neither be thou dismayed: for the LORD thy God [is] with thee whithersoever thou goest.
- Young's Literal Translation (YLT)
- 'Have not I commanded thee? be strong and courageous; be not terrified nor affrighted, for with thee [is] Jehovah thy God in every [place] whither thou goest.'
Read in context
- 7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- 8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- 9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- 10ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ ಆಜ್ಞಾಪಿಸಿ--
- 11ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
Cross references
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Jeremiah 1:7–8 ಯೆರೆಮೀಯ 1:7–8ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು. ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
- Psalm 27:1–2 ಕೀರ್ತನೆಗಳು 27:1–2ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Joshua 1:6–7 ಯೆಹೋಶುವ 1:6–7ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Deuteronomy 20:1 ಧರ್ಮೋಪದೇಶಕಾಂಡ 20:1ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Deuteronomy 31:7–8 ಧರ್ಮೋಪದೇಶಕಾಂಡ 31:7–8ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- Isaiah 43:5 ಯೆಶಾಯ 43:5ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
- Judges 6:14 ನ್ಯಾಯಸ್ಥಾಪಕರು 6:14ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.