Joshua · chapter 10 · verse 8
Joshua 10:8 in Kannada
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
Aadare kartanu yehoshuvanige--neenu avarige bhayapadabeda; yaakandare ninna kaiyalli avarannu oppisikottiddene, avaralli obbanaadaroo ninna edurinalli nilluvadilla andanu.
Joshua 10:8 in English
- King James Version (KJV)
- And the LORD said unto Joshua, Fear them not: for I have delivered them into thine hand; there shall not a man of them stand before thee.
- World English Bible (WEB)
- The LORD said to Joshua, “Don’t fear them, for I have delivered them into your hands. Not a man of them will stand before you.”
- American Standard Version (ASV)
- And Jehovah said unto Joshua, Fear them not: for I have delivered them into thy hands; there shall not a man of them stand before thee.
- Bible in Basic English (BBE)
- And the Lord said to Joshua, Have no fear of them, for I have given them into your hands; they will all give way before you.
- Darby Translation (DBY)
- And Jehovah said to Joshua, Fear them not; for into thy hand have I given them: not a man of them shall stand before thee.
- Webster's Bible (WBS)
- And the LORD said to Joshua, Fear them not: for I have delivered them into thy hand; there shall not a man of them stand before thee.
- Young's Literal Translation (YLT)
- And Jehovah saith unto Joshua, 'Be not afraid of them, for into thy hand I have given them, there doth not stand a man of them in thy presence.'
Read in context
- 6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
- 7ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.
- 8ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
- 9ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
- 10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
Cross references
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Joshua 11:6 ಯೆಹೋಶುವ 11:6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- Psalm 27:1–2 ಕೀರ್ತನೆಗಳು 27:1–2ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Deuteronomy 3:2 ಧರ್ಮೋಪದೇಶಕಾಂಡ 3:2ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
- Isaiah 41:10–15 ಯೆಶಾಯ 41:10–15ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
- Joshua 1:5–9 ಯೆಹೋಶುವ 1:5–9ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ. ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ. ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Judges 4:14–15 ನ್ಯಾಯಸ್ಥಾಪಕರು 4:14–15ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು. ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
- Joshua 8:1 ಯೆಹೋಶುವ 8:1ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
- Deuteronomy 20:1–4 ಧರ್ಮೋಪದೇಶಕಾಂಡ 20:1–4ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ. ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ-- ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ; ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.