Joshua · chapter 11 · verse 12
Joshua 11:12 in Kannada
ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
Idallade yehoshuvanu aa arasugala samasta pattanagalannoo avugala samasta arasugalannoo hididu kattiyinda hodedu kartana sevakanaada mosheyu aajnyaapisida haageye avarannu sampoorna naashamaadibittanu.
Joshua 11:12 in English
- King James Version (KJV)
- And all the cities of those kings, and all the kings of them, did Joshua take, and smote them with the edge of the sword, [and] he utterly destroyed them, as Moses the servant of the LORD commanded.
- World English Bible (WEB)
- Joshua captured all the cities of those kings, with their kings, and he struck them with the edge of the sword, and utterly destroyed them, as Moses the servant of the LORD commanded.
- American Standard Version (ASV)
- And all the cities of those kings, and all the kings of them, did Joshua take, and he smote them with the edge of the sword, and utterly destroyed them; as Moses the servant of Jehovah commanded.
- Bible in Basic English (BBE)
- And all the towns of these kings, and all the kings, Joshua took, and put them to the sword: he gave them up to the curse, as Moses, the servant of the Lord, had said.
- Darby Translation (DBY)
- And all the cities of those kings and all their kings did Joshua take; and he smote them with the edge of the sword, destroying them utterly, as Moses the servant of Jehovah had commanded.
- Webster's Bible (WBS)
- And all the cities of those kings, and all the kings of them, Joshua took, and smote them with the edge of the sword, [and] he utterly destroyed them, as Moses the servant of the LORD commanded.
- Young's Literal Translation (YLT)
- and all the cities of these kings, and all their kings, hath Joshua captured, and he smiteth them by the mouth of the sword; he devoted them, as Moses, servant of Jehovah, commanded.
Read in context
- 10ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
- 11ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.
- 12ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
- 13ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.
- 14ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
Cross references
- Deuteronomy 20:16–17 ಧರ್ಮೋಪದೇಶಕಾಂಡ 20:16–17ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Numbers 33:50–53 ಅರಣ್ಯಕಾಂಡ 33:50–53ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
- Joshua 10:37 ಯೆಹೋಶುವ 10:37ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
- Joshua 10:35 ಯೆಹೋಶುವ 10:35ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
- Joshua 8:8 ಯೆಹೋಶುವ 8:8ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.
- Joshua 11:15 ಯೆಹೋಶುವ 11:15ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
- Joshua 10:39–40 ಯೆಹೋಶುವ 10:39–40ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು. ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Joshua 10:28 ಯೆಹೋಶುವ 10:28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
- Joshua 10:32 ಯೆಹೋಶುವ 10:32ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
- Joshua 9:24 ಯೆಹೋಶುವ 9:24ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
- Joshua 10:30 ಯೆಹೋಶುವ 10:30ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
Original words (Hebrew)
- cities · H5892עִיר ʻîyr
- kings · H4428מֶלֶךְ melek
- kings · H4428מֶלֶךְ melek
- Joshua · H3091יְהוֹשׁוּעַ Yᵉhôwshûwaʻ
- take · H3920לָכַד lâkad
- smote · H5221נָכָה nâkâh
- edge · H6310פֶּה peh
- sword · H2719חֶרֶב chereb
- destroyed · H2763חָרַם châram
- Moses · H4872מֹשֶׁה Môsheh
- servant · H5650עֶבֶד ʻebed
- commanded · H6680צָוָה tsâvâh