Joshua · chapter 12 · verse 11
Joshua 12:11 in Kannada
ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;
Yarmootina arasanu obbanu; laakeeshina arasanu obbanu;
Joshua 12:11 in English
- King James Version (KJV)
- The king of Jarmuth, one; the king of Lachish, one;
- World English Bible (WEB)
- the king of Jarmuth, one; the king of Lachish, one;
- American Standard Version (ASV)
- the king of Jarmuth, one; the king of Lachish, one;
- Bible in Basic English (BBE)
- The king of Jarmuth, one; the king of Lachish, one;
- Darby Translation (DBY)
- the king of Jarmuth, one; the king of Lachish, one;
- Webster's Bible (WBS)
- The king of Jarmuth, one; the king of Lachish, one;
- Young's Literal Translation (YLT)
- The king of Jarmuth, one; The king of Lachish, one;
Read in context
- 9ಯೆರಿಕೋವಿನ ಅರಸನು ಒಬ್ಬನು; ಬೇತೇಲ್ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು;
- 10ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು;
- 11ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;
- 12ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು;
- 13ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;
Cross references
- Joshua 10:31–32 ಯೆಹೋಶುವ 10:31–32ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು. ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
- Joshua 10:3–23 ಯೆಹೋಶುವ 10:3–23ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ-- ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು. ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು. ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು. ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು. ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು. ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು. ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು. ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು. ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು. ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು. ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು. ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು. ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು. ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು. ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ. ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು. ಯೆಹೋಶುವನೂ ಇಸ್ರಾಯೇಲ್ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು. ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ. ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು. ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.