Joshua · chapter 12 · verse 6
Joshua 12:6 in Kannada
ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
Ivarannu kartana sevakanaada mosheyoo israayel makkaloo hodedu bittu avara deshavannu roobenyarigoo gaadyarigoo manasseya ardha gotradavarigoo svaastyavaagi kottanu.
Joshua 12:6 in English
- King James Version (KJV)
- Them did Moses the servant of the LORD and the children of Israel smite: and Moses the servant of the LORD gave it [for] a possession unto the Reubenites, and the Gadites, and the half tribe of Manasseh.
- World English Bible (WEB)
- Moses the servant of the LORD and the children of Israel struck them. Moses the servant of the LORD gave it for a possession to the Reubenites, and the Gadites, and the half-tribe of Manasseh.
- American Standard Version (ASV)
- Moses the servant of Jehovah and the children of Israel smote them: and Moses the servant of Jehovah gave it for a possession unto the Reubenites, and the Gadites, and the half-tribe of Manasseh.
- Bible in Basic English (BBE)
- Moses, the servant of the Lord, and the children of Israel overcame them; and Moses, the servant of the Lord, gave their land for a heritage to the Reubenites, and the Gadites, and the half-tribe of Manasseh.
- Darby Translation (DBY)
- Moses the servant of Jehovah and the children of Israel smote them, and Moses the servant of Jehovah gave it for a possession to the Reubenites, and to the Gadites, and to half the tribe of Manasseh.
- Webster's Bible (WBS)
- Them did Moses the servant of the LORD, and the children of Israel smite: and Moses the servant of the LORD gave it [for] a possession to the Reubenites, and the Gadites, and the half-tribe of Manasseh.
- Young's Literal Translation (YLT)
- Moses, servant of Jehovah, and the sons of Israel have smitten them, and Moses, servant of Jehovah, giveth it — a possession to the Reubenite, and to the Gadite, and to the half of the tribe of Manasseh.
Read in context
- 4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
- 5ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
- 6ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- 7ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
- 8ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
Cross references
- Numbers 32:33 ಅರಣ್ಯಕಾಂಡ 32:33ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
- Deuteronomy 3:11–17 ಧರ್ಮೋಪದೇಶಕಾಂಡ 3:11–17ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Luke 22:29–42 ಲೂಕನು 22:29–42ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು. ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು. ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು. ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು. ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ. ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು. ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು. ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು. ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ-- ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
- Numbers 21:24–35 ಅರಣ್ಯಕಾಂಡ 21:24–35ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Numbers 32:29 ಅರಣ್ಯಕಾಂಡ 32:29ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
- Joshua 13:8–32 ಯೆಹೋಶುವ 13:8–32ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ. ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, ಯಹಚಾ ಕೆದೇಮೋತ್, ಮೇಫಾಯತ್, ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್, ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು. ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು. ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು. ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
Original words (Hebrew)
- Moses · H4872מֹשֶׁה Môsheh
- servant · H5650עֶבֶד ʻebed
- children · H1121בֵּן bên
- Israel · H3478יִשְׂרָאֵל Yisrâʼêl
- smite · H5221נָכָה nâkâh
- Moses · H4872מֹשֶׁה Môsheh
- servant · H5650עֶבֶד ʻebed
- gave · H5414נָתַן nâthan
- possession · H3425יְרֻשָּׁה yᵉrushshâh
- Reubenites · H7206רְאוּבֵנִי Rᵉʼûwbênîy
- Gadites · H1425גָּדִי Gâdîy
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh