Joshua · chapter 13 · verse 14
Joshua 13:14 in Kannada
ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
Aadare mosheyu leviyara gotrakke maatra yaava baadhyateyannoo kodalilla; yaakandare avanu avarige helida prakaara israayelina devaraada kartana dahana baligale avara baadhyateyaagive.
Joshua 13:14 in English
- King James Version (KJV)
- Only unto the tribe of Levi he gave none inheritance; the sacrifices of the LORD God of Israel made by fire [are] their inheritance, as he said unto them.
- World English Bible (WEB)
- Only he gave no inheritance to the tribe of Levi. The offerings of the LORD, the God of Israel, made by fire are his inheritance, as he spoke to him.
- American Standard Version (ASV)
- Only unto the tribe of Levi he gave no inheritance; the offerings of Jehovah, the God of Israel, made by fire are his inheritance, as he spake unto him.
- Bible in Basic English (BBE)
- Only to the tribe of Levi he gave no heritage; the offerings of the Lord, the God of Israel, made by fire are his heritage, as he said to him.
- Darby Translation (DBY)
- Only to the tribe of Levi he gave no inheritance: the offerings by fire of Jehovah the God of Israel are their inheritance, as he said to them.
- Webster's Bible (WBS)
- Only to the tribe of Levi he gave no inheritance; the sacrifices of the LORD God of Israel made by fire [are] their inheritance, as he said to them.
- Young's Literal Translation (YLT)
- Only, to the tribe of Levi he hath not given an inheritance; fire-offerings of Jehovah, God of Israel, is its inheritance, as He hath spoken to it.
Read in context
- 12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- 13ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
- 14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
- 15ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
- 16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
Cross references
- Numbers 18:20–24 ಅರಣ್ಯಕಾಂಡ 18:20–24ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ. ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- Joshua 14:3–4 ಯೆಹೋಶುವ 14:3–4ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
- Deuteronomy 18:1–2 ಧರ್ಮೋಪದೇಶಕಾಂಡ 18:1–2ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು. ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
- Deuteronomy 12:12 ಧರ್ಮೋಪದೇಶಕಾಂಡ 12:12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Deuteronomy 12:19 ಧರ್ಮೋಪದೇಶಕಾಂಡ 12:19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- Deuteronomy 10:9 ಧರ್ಮೋಪದೇಶಕಾಂಡ 10:9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.