Joshua · chapter 13 · verse 22
Joshua 13:22 in Kannada
ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
Idallade israayel makkalu sanharisida itarara sangada beyorana maganaada bilaama nemba kani heluvavanannu kattiyinda kondu haakidaru.
Joshua 13:22 in English
- King James Version (KJV)
- Balaam also the son of Beor, the soothsayer, did the children of Israel slay with the sword among them that were slain by them.
- World English Bible (WEB)
- The children of Israel also killed Balaam the son of Beor, the soothsayer, with the sword, among the rest of their slain.
- American Standard Version (ASV)
- Balaam also the son of Beor, the soothsayer, did the children of Israel slay with the sword among the rest of their slain.
- Bible in Basic English (BBE)
- And Balaam, the son of Beor, the prophet, the children of Israel put to death with the sword.
- Darby Translation (DBY)
- And Balaam the son of Beor, the diviner, did the children of Israel kill with the sword among them that were slain by them.
- Webster's Bible (WBS)
- Balaam also the son of Beor, the sooth-sayer, did the children of Israel slay with the sword, among them that were slain by them.
- Young's Literal Translation (YLT)
- And Balaam, son of Beor, the diviner, have the sons of Israel slain with the sword, among their wounded ones.
Read in context
- 20ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್,
- 21ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
- 22ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
- 23ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
- 24ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.
Cross references
- Numbers 31:8 ಅರಣ್ಯಕಾಂಡ 31:8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Numbers 22:5–7 ಅರಣ್ಯಕಾಂಡ 22:5–7ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು. ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
- Numbers 24:1 ಅರಣ್ಯಕಾಂಡ 24:1ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.