Joshua · chapter 13 · verse 25
Joshua 13:25 in Kannada
ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
Yagjer; gilyaadina samasta pattana galoo rabbaakke eduraagiruva aroyerina varegoo iruva ammonina makkala ardha deshavu;
Joshua 13:25 in English
- King James Version (KJV)
- And their coast was Jazer, and all the cities of Gilead, and half the land of the children of Ammon, unto Aroer that [is] before Rabbah;
- World English Bible (WEB)
- Their border was Jazer, and all the cities of Gilead, and half the land of the children of Ammon, to Aroer that is near Rabbah;
- American Standard Version (ASV)
- And their border was Jazer, and all the cities of Gilead, and half the land of the children of Ammon, unto Aroer that is before Rabbah;
- Bible in Basic English (BBE)
- And their limit was Jazer, and all the towns of Gilead, and half the land of the children of Ammon, to Aroer before Rabbah;
- Darby Translation (DBY)
- And their territory was Jaazer, and all the cities of Gilead, and half the land of the children of Ammon, to Aroer which is before Rabbah;
- Webster's Bible (WBS)
- And their border was Jazer, and all the cities of Gilead, and half the land of the children of Ammon, to Aroer that [is] before Rabbah;
- Young's Literal Translation (YLT)
- and the border is to them Jazer, and all the cities of Gilead, and the half of the land of the Bene-Ammon, unto Aroer which [is] on the front of Rabbah,
Read in context
- 23ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
- 24ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.
- 25ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
- 26ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
- 27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
Cross references
- 2 Samuel 12:26 2 ಸಮುವೇಲನು 12:26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
- Numbers 32:35 ಅರಣ್ಯಕಾಂಡ 32:35ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- 2 Samuel 11:1 2 ಸಮುವೇಲನು 11:1ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
- Ezekiel 21:20 ಯೆಹೆಜ್ಕೇಲನು 21:20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- Numbers 21:32 ಅರಣ್ಯಕಾಂಡ 21:32ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
- Judges 11:13–27 ನ್ಯಾಯಸ್ಥಾಪಕರು 11:13–27ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು. ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ. ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು. ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು. ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು. ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು. ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ? ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು. ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ? ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು? ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
- Joshua 21:39 ಯೆಹೋಶುವ 21:39ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
- Deuteronomy 2:19 ಧರ್ಮೋಪದೇಶಕಾಂಡ 2:19ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
- Amos 1:14 ಆಮೋಸ 1:14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- Numbers 21:26–30 ಅರಣ್ಯಕಾಂಡ 21:26–30ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.