Joshua · chapter 15 · verse 44
Joshua 15:44 in Kannada
ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
Ashnaa, necheeb, keyaalaa, akjeeb, maareshaaemba avugala graamagalu ombhattu pattanagalu;
Joshua 15:44 in English
- King James Version (KJV)
- And Keilah, and Achzib, and Mareshah; nine cities with their villages:
- World English Bible (WEB)
- Keilah, Achzib, and Mareshah; nine cities with their villages.
- American Standard Version (ASV)
- and Keilah, and Achzib, and Mareshah; nine cities with their villages.
- Bible in Basic English (BBE)
- And Keilah, and Achzib, and Mareshah; nine towns with their unwalled places.
- Darby Translation (DBY)
- and Keilah, and Achzib, and Mareshah: nine cities and their hamlets.
- Webster's Bible (WBS)
- And Keilah, and Achzib, and Mareshah; nine cities with their villages:
- Young's Literal Translation (YLT)
- and Keilah, and Achzib, and Mareshah; nine cities and their villages.
Read in context
- 42ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
- 43ಇಪ್ತಾಹ,
- 44ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
- 45ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
- 46ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ
Cross references
- Micah 1:14–15 ಮೀಕ 1:14–15ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು. ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
- 1 Samuel 23:1–14 1 ಸಮುವೇಲನು 23:1–14ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು. ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು. ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು. ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು. ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು. ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು. ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು. ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು. ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು. ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು. ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
- Genesis 38:5 ಆದಿಕಾಂಡ 38:5ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.