Joshua · chapter 2 · verse 12
Joshua 2:12 in Kannada
ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
Eega naanu nimage daya torisiddarinda neevu nanage mattu nanna tandeya manege dayatorisabeku. Nanage satyavaada gurutannu kodabeku.
Joshua 2:12 in English
- King James Version (KJV)
- Now therefore, I pray you, swear unto me by the LORD, since I have shewed you kindness, that ye will also shew kindness unto my father’s house, and give me a true token:
- World English Bible (WEB)
- Now therefore, please swear to me by the LORD, since I have dealt kindly with you, that you also will deal kindly with my father’s house, and give me a true sign;
- American Standard Version (ASV)
- Now therefore, I pray you, swear unto me by Jehovah, since I have dealt kindly with you, that ye also will deal kindly with my father’s house, and give me a true token;
- Bible in Basic English (BBE)
- So now, will you give me your oath by the Lord, that, because I have been kind to you, you will be kind to my father's house,
- Darby Translation (DBY)
- And now, I pray you, swear to me by Jehovah, since I have dealt kindly with you, that ye will also deal kindly with my father's house, and give me a certain sign,
- Webster's Bible (WBS)
- Now therefore, I pray you, swear to me by the LORD, since I have showed you kindness, that ye will also show kindness to my father's house, and give me a true token:
- Young's Literal Translation (YLT)
- 'And now, swear ye, I pray you, to me by Jehovah — because I have done with you kindness — that ye have done, even ye, kindness with the house of my father, and have given to me a true token,
Read in context
- 10ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
- 11ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- 12ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
- 13ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
- 14ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
Cross references
- Joshua 2:18 ಯೆಹೋಶುವ 2:18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Genesis 24:9 ಆದಿಕಾಂಡ 24:9ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
- Mark 14:44 ಮಾರ್ಕನು 14:44ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
- 2 Chronicles 36:13 2 ಪೂರ್ವಕಾಲವೃತ್ತಾಂತ 36:13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- 1 Samuel 30:15 1 ಸಮುವೇಲನು 30:15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
- Joshua 9:18–20 ಯೆಹೋಶುವ 9:18–20ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು. ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು. ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Jeremiah 12:16 ಯೆರೆಮೀಯ 12:16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.