Joshua · chapter 2 · verse 19
Joshua 2:19 in Kannada
ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
Yaavanaadaroo ninna maneya baagalinda horatu beedige bandare avana raktavu avana taleyamele iruvadu. Naavu niraparaadhigalaagiruvevu. Aadare ninna sangada maneyalli iruva yaavana melaadaroo kai haakalpattare avana raktada aparaadhavu namma taleya mele iruvadu.
Joshua 2:19 in English
- King James Version (KJV)
- And it shall be, [that] whosoever shall go out of the doors of thy house into the street, his blood [shall be] upon his head, and we [will be] guiltless: and whosoever shall be with thee in the house, his blood [shall be] on our head, if [any] hand be upon him.
- World English Bible (WEB)
- It shall be that whoever goes out of the doors of your house into the street, his blood will be on his head, and we will be guiltless. Whoever is with you in the house, his blood shall be on our head, if any hand is on him.
- American Standard Version (ASV)
- And it shall be, that whosoever shall go out of the doors of thy house into the street, his blood shall be upon his head, and we shall be guiltless: and whosoever shall be with thee in the house, his blood shall be on our head, if any hand be upon him.
- Bible in Basic English (BBE)
- Then if anyone goes out of your house into the street, his blood will be on his head, we will not be responsible; but if any damage comes to anyone in the house, his blood will be on our heads.
- Darby Translation (DBY)
- and it shall be, that whoever shall go out of the doors of thy house into the street, — his blood shall be upon his head, and we shall be innocent; but every one who shall be with thee in the house, his blood shall be upon our head, if any hand be upon him.
- Webster's Bible (WBS)
- And it shall be, [that] whoever shall go out of the doors of thy house into the street, his blood [shall be] upon his head, and we [will be] guiltless: and whoever shall be with thee in the house, his blood [shall be] on our head, if [any] hand be upon him.
- Young's Literal Translation (YLT)
- and it hath been, any one who goeth out from the doors of thy house without, his blood [is] on his head, and we are innocent; and any one who is with thee in the house, his blood [is] on our head, if a hand is on him;
Read in context
- 17ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
- 18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
- 19ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
- 20ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
- 21ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.
Cross references
- Acts 27:31 ಅಪೊಸ್ತಲರ ಕೃತ್ಯಗಳು 27:31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- 1 Kings 2:36–42 1 ಅರಸುಗಳು 2:36–42ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು. ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು. ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು. ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್ನಲ್ಲಿದ್ದಾರೆಂದು ತಿಳಿಸಿ ದರು. ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು. ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು. ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?
- Exodus 12:23 ವಿಮೋಚನಕಾಂಡ 12:23ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
- Ezekiel 33:4–5 ಯೆಹೆಜ್ಕೇಲನು 33:4–5ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು. ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
- 1 Kings 2:32 1 ಅರಸುಗಳು 2:32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- Matthew 27:24–25 ಮತ್ತಾಯನು 27:24–25ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Numbers 35:26–28 ಅರಣ್ಯಕಾಂಡ 35:26–28ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ. ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು.
- Matthew 24:17 ಮತ್ತಾಯನು 24:17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
- Acts 20:26 ಅಪೊಸ್ತಲರ ಕೃತ್ಯಗಳು 20:26ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
- 2 Samuel 4:11 2 ಸಮುವೇಲನು 4:11ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.